ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಸುಟ್ಟುಹೋಗಿದೆ.ಬಸವೇಶ್ವರ ನಗರದ ನಿವಾಸಿ ಗಂಗಣ್ಣ ಅಮರಪ್ಪ ತಲೇಖಾನ್ ಅವರಿಗೆ ಸೇರಿದ ಗುಡಿಸಲು ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಕಿಗೆ ₹2.25 ಲಕ್ಷ ನಗದು, ಎರಡೂವರೆ ತೊಲೆ ಬಂಗಾರ, 22 ತೊಲೆ ಬೆಳ್ಳಿ, 35 ಕ್ವಿಂಟಲ್ ಹತ್ತಿ, ಜೋಳ, ಅಕ್ಕಿ, ಭತ್ತ, ಬಟ್ಟೆ ಹಾಗೂ ಗೃಹೋಪಯೋಗಿ ವಸ್ತುಗಳು ಆಹುತಿಯಾಗಿದ್ದು, ಸುಮಾರು ₹10 ಲಕ್ಷ ನಷ್ಟವಾಗಿದೆ.
ಈ ಸುದ್ದಿ ಓದಿದ್ದೀರಾ? ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ
ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಗ್ರಾಮ ಲೆಕ್ಕಾಧಿಕಾರಿ ಅಮರೇಶ ನಾಯ್ಕ ಭೇಟಿ ನೀಡಿ ನಷ್ಟ ಪರಿಶೀಲಿಸಿದರು.




