ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೂ,ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶವು ರಜಾಕರ ಅಳ್ವಿಕೆಗೆ ಒಳಪಟ್ಟಿತ್ತು. 1848 ಸೆ.17ರಂದು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮದಿಂದಾಗಿ ಈ ಪ್ರದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು ಮಸ್ಕಿ ತಹಶೀಲ್ದಾರ್ ಸುಧಾ ಅರಮನೆ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು. “ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿರುವ ಸಂವಿಧಾನದ 371(ಜೆ) ವಿಧಿಯು ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆ” ಎಂದರು.
ಕಾರ್ಯಕ್ರಮದಲ್ಲಿ ಡಾ. ಶಿವಶರಣಪ್ಪ ಇತ್ತಲಿ, ಅಬ್ದುಲ್ ಗನಿ ಸಾಬ್ . ಜೆ ಆರ್ ಎಂ ಶಾಲೆ ಮುಖ್ಯಶಿಕ್ಷಕ ಸಿದ್ದ ರೆಡ್ಡಿ ಗಿಣಿವಾರ. ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ಕಲ್ ಇನ್‌ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ, ಸಬ್ ಇನ್‌ಸ್ಪೆಕ್ಟರ್ ಮಣಿಕಂಠ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಪ್ಪ ತನಿಕೆದಾರ ಸೇರಿದಂತೆ ಹಲವು ಮುಖಂಡರು ಇದ್ದರು.