ರಾಯಚೂರು | ಸಾಗುವಳಿದಾರರಿಗೆ ಭೂಮಿ ವಸತಿ ಒದಗಿಸಿ; ಇಲ್ಲದಿದ್ದರೆ ಮೇ 1ರಿಂದ ಅನಿರ್ದಿಷ್ಟಾವಧಿ ಹೋರಾಟ; ಮಾರೆಪ್ಪ ಹರವಿ

Date:

ಚುನಾವಣೆಗೂ ಮೊದಲು ಸರ್ಕಾರಗಳು ವಸತಿ ವಂಚಿತರಿಗೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ನೀಡುವುದಾಗಿ ಸುಳ್ಳು ಭರವಸೆ ನೀಡಿ ಇದೀಗ ಕಾನೂನು ಕಠಿಣವಾಗಿದೆ ಎಂದು ಹೇಳಿ ವಂಚಿಸುತ್ತಿದ್ದಾರೆ. ಕೂಡಲೇ ಕಾನೂನು ಸಡಲಿಕೆ ಮಾಡಿ, ಭೂರಹಿತ ವಸತಿ ರೈತರಿಗೆ ನ್ಯಾಯ ಒದಗಿಸಕೊಡಬೇಕು ಇಲ್ಲವಾದಲ್ಲಿ ಮೇ1 ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಾಡು ಇಲ್ಲವೇ ಮಡಿ ಚಳವಳಿ ಭಾಗವಾಗಿ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳೆದ 5 ದಶಕಗಳಿಂದ ಲಕ್ಷಾಂತರ ಬಗರ್ ಹುಕುಂ ಸಾಗುವಳಿದಾರರು ಭೂಮಿ ಹಕ್ಕಿಗಾಗಿ ಹಾಗೂ ವಸತಿ ವಂಚಿತರು ಸೂರಿಗಾಗಿ ಕಾಯುತ್ತಿದ್ದು, ಸರ್ಕಾರಗಳು ಭರವಸೆಗಳನ್ನು ಬಿಟ್ಟರೇ ಬೇರೇನೂ ನೀಡಿಲ್ಲ ಎಂದರು.

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರು ಭೂ ವಂಚಿತರಿಗೆ ಕನಿಷ್ಠ ಎರಡು ಎಕರೆ ಭೂಮಿ ಸಿಗಬೇಕು, ರಾಜ್ಯದ ಜನರಿಗೆ ಭೂಮಿಯನ್ನು ಒದಗಿಸಿಕೊಡುವುದು ಅವರ ಜೀವನದ ಉದ್ದೇಶವಾಗಿತ್ತು ಇದಕ್ಕಾಗಿ ಹೋರಾಟಗಳು ನಡೆದಿವೆ. ಆದರೆ ಸರ್ಕಾರಗಳು ಮಾತ್ರ ಭೂಮಿ, ವಸತಿ ನೀಡದೇ ಬಡವರನ್ನು ನಿರ್ಲಕ್ಷಿಸುತ್ತಿದೆ ಎಂದರು.

ಕಾರ್ಪೋರೇಟ್ ಕಂಪನಿಗಳಿಗೆ, ಶ್ರೀಮಂತರಿಗೆ ಭೂಮಿ ನೀಡಲು ಸಿಂಗಲ್ ವಿಂಡೋ ಸ್ಥಾಪಿಸಿ, ಬಡವರ ಭೂಮಿ ಹಕ್ಕಿನ ಕುರಿತು ಕಾನೂನು ನೆಪಗಳನ್ನು ಹೇಳುತ್ತಿವೆ. ಇತ್ತೀಚೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕಾನೂನು ಬಿಗಿ ಇರುವ ಕಾರಣ ಭೂಮಿ ಕೊಡಲು ಆಗುವುದಿಲ್ಲ ಎಂಬ ಹೇಳಿಕೆ ನೀಡಿದ್ದು, ಇದು ಬಡವರಿಗೆ ಅನ್ಯಾಯ ಮಾಡುವ ಹುನ್ನಾರವಾಗಿದೆ. ಸರ್ಕಾರದಲ್ಲಿ ಕಾರ್ಪೋರೇಟ್, ಬಂಡವಾಳ ಶಾಹಿಗಳಿಗೆ ಭೂಮಿ ಕೊಡಲು ಅವಕಾಶ ಇದ್ದು, ಬಡವರಿಗೆ ನೀಡಲು ಕೊಡಲು ಆಗುವುದಿಲ್ಲ ಏಕೆ ಕೂಡಲೇ ಕಾನೂನು ಸಡಲಿಕೆ ಮಾಡಿ, ಭೂಮಿ ಮತ್ತು ವಸತಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಭೂಮಿ, ವಸತಿ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ನಿರ್ಲಕ್ಷ್ಯ ಮಾಡಿದ್ದೇ ಆದರೆ, ರಾಜ್ಯಾದ್ಯಂತ ಅನಿರ್ಧಿಷ್ಠಾವಧಿ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ ಜಿಲ್ಲೆಗೆ 31 ನೇ ಸ್ಥಾನ; 12,967 ವಿದ್ಯಾರ್ಥಿಗಳು ಪಾಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸಂದರ್ಭದಲ್ಲಿ ಸಂಗದ ಪ್ರಮುಖರಾದ ಆಂಜನೇಯ್ಯ ಕುರುಬದೊಡ್ಡಿ, ರಂಗಾರೆಡ್ಡಿ, ಬಿ.ಎನ್.ಯರದಿಹಾಳ, ಹುಲಿಗೆಪ್ಪ ಮಡಿವಾಳ, ರಮೇಶ ಗಾಣದಾಳ, ಮಾರೆಮ್ಮ, ಭೀಮಣ್ಣ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...