ರಾಯಚೂರು | ಡೆಂಗ್ಯೂ, ಮಲೇರಿಯಾ ಹೆಚ್ಚಳ; ನಗರದಲ್ಲಿ ಸ್ವಚ್ಚತಾ ಅಭಿಯಾನ

Date:

ರಾಯಚೂರು ನಗರದಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿದ್ದು, ನಗರಸಭೆಯಿಂದ ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಚತಾ ಅಭಿಯಾನ ಪ್ರಾರಂಭಿಸಿರುವುದು ಸ್ವಾಗತಾರ್ಹ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ನಗರಸಭೆಯೊಂದಿಗೆ ಸಹಕರಿಸಬೇಕು. ಸ್ವಯಂಪ್ರೇರಿತವಾಗಿ ನಗರ ಸ್ವಚ್ಚತೆಗೆ ಕೈ ಜೋಡಿಸಬೇಕು ಎಂದು ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು ಹೇಳಿದರು.

- Advertisement -

ರಾಯಚೂರು ನಗರಸಭೆ, ಜಿಲ್ಲಾಡಳಿತ ಮತ್ತು ಎನ್ ಎಸ್ ಬೋಸರಾಜ ಫೌಂಡೇಷನ್‌ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಐದು ದಿನಗಳ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ನಗರಸಭೆ ಹಿರಿಯ ಸದಸ್ಯ ಜಯಣ್ಣಮಾತನಾಡಿ, “ನಗರಸಭೆಯಿಂದ ಮಾತ್ರ ನಗರ ಸ್ವಚ್ಚತೆ ಸಾಧ್ಯವಾಗುವದಿಲ್ಲ, ನಗರದ ನಿವಾಸಿಗಳೂ ಕೂಡ ಸಹಕರಿಸಬೇಕಿದೆ. ನಗರದಲ್ಲಿ ಹೆಚ್ಚುತ್ತಿರುವ ಕಸವನ್ನು ನಿಯಂತ್ರಿಸಲು ಎಲ್ಲೆಂದರಲ್ಲಿ ಕಸ ಎಸೆಯದೆ ನಗರಸಭೆ ವಾಹನಗಳಿಗೆ ನೀಡಿದರೆ ಬಹುತೇಕ ಕಸ ವಿಲೇವಾರಿಯಾಗುತ್ತದೆ. ನಗರಸಭೆ ಸ್ವಚ್ಚತೆಗೆ ಆಧ್ಯತೆ ನೀಡಿ ಕಾರ್ಯ ನಿರ್ವಹಿಸುತ್ತಿದೆ. ಇನ್ನಷ್ಚು ಸ್ವಚ್ಚತೆಗೆ ಜನರು ಸಹಕರಿಸಬೇಕು” ಎಂದರು.

ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಮಾತನಾಡಿ‌, “ನಗರಸಭೆ ಆಧ್ಯತೆ ಮೇಲೆ ಸ್ವಚ್ಚತಾ ಅಭಿಯಾನ ಪ್ರಾರಂಭಿಸಿರುವದು ಶ್ಲಾಘನೀಯವಾಗಿದೆ. ಕಸ ವಿಲೇವಾರಿಗೆ ಬೇಕಾದ ಸಹಾಯ ಸಹಕಾರ ನೀಡಲಾಗುವುದು. ಸಂಘ ಸಂಸ್ಥೆಗಳ, ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಕಸ ವಿಲೇವಾರಿಗೆ ಮುಂದಾಗಬೇಕು. ಪಕ್ಷಬೇಧ ಮೆರೆತು ಎಲ್ಲರೂ ಕೈ ಜೋಡಿಸಿದರೆ ಎಲ್ಲ ರೀತಿಯ ನೆರವು ನೀಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸೌಜನ್ಯ ಪ್ರಕರಣ ಮರು ತನಿಖೆಗೆ ಶ್ರೀರಾಮ ಸೇನೆ ಆಗ್ರಹ

“50 ಟ್ರಾಕ್ಟರ್ ಮತ್ತು 15 ಜೆಸಿಬಿಗಳಿಂದ ನಗರದ ಹಲವು ವಾರ್ಡ್‌ಗಳಲ್ಲಿ ಐದು ದಿನಗಳವರೆಗೆ ಸ್ವಚ್ಚತಾ ಕಾರ್ಯ ನಡೆಯಲಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಸಿದ್ದಲಿಂಗಯ್ಯ, ನಗರಸಭೆ ಸದಸ್ಯರುಗಳಾದ ಜಿಂದಪ್ಪ, ದರೂರು ಬಸವರಾಜ, ನರಸಿಂಹಲು ಮಾಡಗಿರಿ, ಬಿ ರಮೇಶ, ಸಾಜೀದ ಸಮೀರ್, ಕೆ ಶಾಂತಪ್ಪ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ತಿಮ್ಮಾರೆಡ್ಡಿ, ಮಹ್ಮದಶಾಲಂ, ನಗರ ಬ್ಲಾಕ್ ಅಧ್ಯಕ್ಷ ಜಿ ಬಸವರಾಜರೆಡ್ಡಿ, ಹರಿಬಾಬು, ಜಾವಿದ್ ಉಲ್ ಹಕ್, ಸುರೇಶ, ವಾಹಿದ್, ಅಲಿ, ನರಸರೆಡ್ಡಿ, ತಿಮ್ಮಪ್ಪನಾಯಕ, ಜಿ. ಸುರೇಶ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...