ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

Date:

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸದೆ ತಕ್ಷಣ ಕ್ರಮ ಕೈಗೊಳ್ಳುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ನಡೆಸಲಾಯಿತು.

- Advertisement -

ಧರಣಿಯಲ್ಲಿ ಎನ್‌ಸಿಐಎಸ್‌ಎಂ ಮತ್ತು ಎನ್‌ಸಿಎಚ್ ಕಾಯ್ದೆಗಳ ಅನ್ವಯ ಆಯುಷ್ ವೈದ್ಯರು ಕೆಲಸ ನಿರ್ವಹಿಸಲು ಅನುಕೂಲ ಕಲ್ಪಿಸಬೇಕು. ಆಧುನಿಕ ಔಷಧಗಳ ಬಳಕೆಗೆ ಅನುಮತಿ ನೀಡಬೇಕು ಹಾಗೂ ಗೆಜೆಟ್ ಅಧಿಸೂಚನೆಗಳಿಗೆ ಅನುಗುಣವಾಗಿ ಆಯುಷ್ ವೈದ್ಯರ ವೃತ್ತಿಪರ ಹಕ್ಕುಗಳು ಮತ್ತು ಸೇವಾವಕಾಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕೆಪಿಎಂಇ ನೋಂದಣಿ ಮತ್ತು ನವೀಕರಣ, ಫೈರ್ ಎನ್‌ಒಸಿ ಸೇರಿದಂತೆ ಆಯುಷ್ ಕ್ಲಿನಿಕ್‌ಗಳಿಗೆ ಸಂಬಂಧಿಸಿದ ಪ್ರಾಯೋಗಿಕ ಸಮಸ್ಯೆಗಳಿಗೆ ಸರಳ ಹಾಗೂ ಸ್ಪಷ್ಟ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಆಯುಷ್ ಘಟಕದ ಅಧ್ಯಕ್ಷ ಡಾ. ಮೋಹನ್ ಬೆನಕದಾರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಲೋಪತಿ ವೈದ್ಯರಂತೆ ಆಯುಷ್ ವೈದ್ಯರಿಗೂ ಸಮಾನ ವೇತನ ನೀಡಬೇಕು. ಎನ್‌ಸಿಐಎಸ್‌ಎಂ ಮಾನ್ಯತೆ ಪಡೆದ ಪದವಿ ಕೋರ್ಸ್‌ಗಳು, ಪಠ್ಯಕ್ರಮ ಹಾಗೂ ವೈದ್ಯಕೀಯ ವ್ಯಾಪ್ತಿಯ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸಮಗ್ರ ಅರಿವು ಹೊಂದಬೇಕು ಎಂದು ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ನೀಡಲಾಗುವ ಆಯುಷ್ ಪದವಿಯ ಕಾನೂನುಬದ್ಧ ವ್ಯಾಪ್ತಿಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಆಯುಷ್ ವೈದ್ಯರ ವೃತ್ತಿಪರ ಹಕ್ಕುಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಆನಂದ ಎಸ್. ಕಿರಿಶಾಳ ಮಾತನಾಡಿ, ರೋಗಿಗಳಲ್ಲದವರು ದೂರು ನೀಡಿದ ಕೂಡಲೇ ಆಯುಷ್‌ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅಲೋಪತಿ ವೈದ್ಯರ ವಿರುದ್ಧವೂ ದೂರುಗಳಿದ್ದರೂ ತನಿಖೆ ನಡೆಸಲಾಗುತ್ತದೆ. ಆದರೆ ಆಯುಷ್ ವೈದ್ಯರ ಮೇಲಷ್ಟೇ ತ್ವರಿತ ಕ್ರಮ ಯಾಕೆ ಎನ್ನುವ ಪ್ರಶ್ನೆ ಎದ್ದಿದೆ ಎಂದು ಹೇಳಿದರು.

ದೇವದುರ್ಗ ಮತ್ತು ಮಾನ್ವಿ ತಾಲೂಕು ವೈದ್ಯಾಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತಾಲೂಕು ಮಟ್ಟದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಂದಿತಾ ಮಾತನಾಡಿ, ಆಯುಷ್ ಫೆಡರೇಶನ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಕುರಿತು ಸೋಮವಾರ ಮಾಹಿತಿ ನೀಡಲಾಗಿದ್ದು, ಪರಿಶೀಲನೆಗೆ ಸ್ವಲ್ಪ ಸಮಯಾವಕಾಶ ಕೋರಿದ್ದೇವೆ. ಆಯುಷ್ ವೈದ್ಯರನ್ನು ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಆರೋಪದ ಕುರಿತು ಪರಿಶೀಲನೆ ನಡೆಸಲಾಗುವುದು. ತಾಲೂಕು ವೈದ್ಯಾಧಿಕಾರಿಗಳ ವಿರುದ್ಧ ಬಂದಿರುವ ದೂರುಗಳ ವಿಚಾರಣೆಯೂ ನಡೆಯಲಿದೆ. ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಪ್ರತಿಭಟನೆಯಲ್ಲಿ ಡಾ. ಶ್ರೀಕಾಂತ ಕೊಂಕಣಿ, ಡಾ. ಅಮೀತ್ ಎಂ.ಎಸ್, ಡಾ. ಆನಂದ ಕುಲಕರ್ಣಿ, ಡಾ. ಮಹಾವೀರ್ ಹಾವೇರಿ, ಡಾ. ಸಂದೀಪ್ ಕುಲಕರ್ಣಿ, ಡಾ. ರವೀಂದ್ರ, ಡಾ. ಎ.ಡಿ. ಹನೀಫ್, ಡಾ. ಸುನೀಲ್ ರಾಯ್, ಡಾ. ರಾಜೇಂದ್ರ, ಡಾ. ಶಶಿಕಾಂತ್ ಹೆಚ್.ಸಿ, ಡಾ. ಸುನಿಲ್ ಆರ್. ಹಿರೇಮಠ, ಡಾ. ಸಂತೋಷ ಎಂ.ಬಿ, ಡಾ. ಶ್ರೀನಿವಾಸ ಕೆ. ಬನ್ನಿಗೋಳ, ಡಾ. ಸೋಮಶೇಖ‌ರ್ ಹುಡೆದ್, ಡಾ. ಜಿ.ಬಿ. ಕುಂಬಾರ, ಡಾ. ಪ್ರಕಾಶ ಪಾಟೀಲ್ ಸೇರಿದಂತೆ ನೂರಾರು ಆಯುಷ್ ವೈದ್ಯರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಕೆಜಿಎಫ್ | ಚರಂಡಿ ವ್ಯವಸ್ಥೆ ಇಲ್ಲದೆ ಮಳೆನೀರು–ಕೊಳಚೆ ನೀರು ರಸ್ತೆಗೆ; ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಆತಂಕ

ಬೇತಮಂಗಲ ಗ್ರಾಮದ ಗ್ರಾಮೀಣ ಪ್ರೌಢಶಾಲೆ ಮುಂಭಾಗದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ...

ಕೋಲಾರ | ಮಾರುಕಟ್ಟೆ ಜಾಗದ ಕಡತಕ್ಕೆ ವಿಶೇಷ ಅಧಿವೇಶನದಲ್ಲಿ ಮುಕ್ತಿ ನೀಡಿ

ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಿರುವ 100 ಎಕರೆ ಸರ್ಕಾರಿ...