ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 3ಎ – 3(5) ಅನ್ನು ಜಾರಿಗೆ ತರಲು ಎಲ್ಲ ಸಿಇಒಗಳಿಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಿಇಒ ಮೂಲಕ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಮಹಿಳಾ ಒಕ್ಕೂಟದ (ಆರ್‌ಎಂಒ) ಕಾರ್ಯಕರ್ತರು ನವೆಂಬರ್ 30ರಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದು, “ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಅಧ್ಯಾಯ 2ರ ಅಡಿಯಲ್ಲಿ ಸೆಕ್ಷನ್ 3ಎಯ 3(5)ಅನ್ನು ಅನುಷ್ಠಾನಗೊಳಿಸಲು ಆರ್‌ಡಿಪಿಆರ್ ಕೂಡಲೇ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.
“ಸೆಕ್ಷನ್ 3(ಎ)ಯ 3(5) ವಿಭಾಗವನ್ನು ಜಾರಿಗೆ ತರದಿರುವುದು ಗ್ರಾಮ ಸಭೆಗಳ ಅಧಿಕಾರಗಳಿಗೆ ದೊಡ್ಡ ಅನ್ಯಾಯವಾಗಿದೆ. ಇದರಿಂದ ವಿಶೇಷವಾಗಿ ಮಹಿಳೆಯರಿಗೆ ಅವಮಾನವಾಗುತ್ತಿದೆ ಎಂದೇ ಭಾವಿಸಿದ್ದೇವೆ. ಈ ಹಿನ್ನೆಲೆಯಲ್ಲಿ ತಮ್ಮ ಹಳ್ಳಿಗಳ ಸಮಗ್ರ ಅಭಿವೃದ್ಧಿಗಾಗಿ ಸದರಿ ಕಾಯ್ದೆಯನ್ನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಯುವ ವಕೀಲನ ಮೇಲೆ ಪೊಲೀಸ್ ದೌರ್ಜನ್ಯ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್
“ಬೇಡಿಕೆ ಈಡೇರಿಸುವಂತೆ ತಮಗೆ ಸಲ್ಲಿಸಿರುವ ಮನವಿಯನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರರಿಗೆ ಕೂಡಲೇ ಕಳುಹಿಸಿ ಈ ಬಗ್ಗೆ ಸೂಕ್ತ ಪರಿಹಾರ ಒದಗಿಸಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಅಭಯ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು.