ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

Date:

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ ಮುರಿದು ಚಿನ್ನ ಮತ್ತು ಬೆಳ್ಳಿ, ಆಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು ಅಂತರರಾಜ್ಯ ಕಳ್ಳನೊಬ್ಬನನ್ನು ಬಂಧಿಸಿ ₹ 25.50 ಲಕ್ಷದ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಸಿಂಧನೂರು ತಾಲ್ಲೂಕಿನ ಲಕ್ಷ್ಮೀಕ್ಯಾಂಪ್‌ನ ನಿವಾಸಿ ಎಸ್.ಶ್ರೀನಿವಾಸ ಅವರು ಕಳೆದ ಆಗಸ್ಟ್ 29 ರಂದು ಸಂಜೆ 5 ಗಂಟೆಗೆ ಮನೆಗೆ ಬೀಗ ಹಾಕಿ ವೈಯಕ್ತಿಕ ಕಾರ್ಯಕ್ರಮಕ್ಕೆ ಊರಿಗೆ ತೆರಳಿದ್ದರು. ಆ.31 ರಂದು ರಾತ್ರಿ ಹಿಂದಿರುಗಿದಾಗ ಮನೆಯ ಬೀಗ ಮುರಿದಿರುವುದು ಕಂಡು ಬಂದಿತ್ತು. ಮನೆಯ ಬೆಡ್ ರೂಂನಲ್ಲಿದ್ದ ತಿಜೋರಿ ಬೀಗವನ್ನು ಮುರಿದು ಅದರಲ್ಲಿದ್ದ 79 ಗ್ರಾಂ ಚಿನ್ನಾಭರಣ, 980 ಗ್ರಾಂ. ಬೆಳ್ಳಿ ಆಭರಣ ಹಾಗೂ ₹ 3.14 ಲಕ್ಷ ನಗದು ಕಳ್ಳತನವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಲು ಗಿರಿ ಅವರು ಸಿಂಧನೂರು ಡಿ.ವೈ.ಎಸ್.ಪಿ. ಚಂದ್ರಶೇಖರ ನಾಯಕ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಪೊಲೀಸ್ ಅಧೀಕ್ಷಕ ಜಿ.ಹರೀಶ, ಗ್ರಾಮೀಣ ಸರ್ಕಲ್ ಇನ್‌ಸ್ಪೆಕ್ಟರ್ ವಿನಾಯಕ, ತುರ್ವಿಹಾಳ ಪಿ.ಎಸ್.ಐ.ಸುಜಾತಾ, ಸಿಬ್ಬಂದಿ ಗೋಪಾಲ, ಅಫೀಜ್, ಅನಿಲ್, ದ್ಯಾಮಣ್ಣ, ಅಮರೇಶ, ತಿಪ್ಪಣ್ಣ ಅವರ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ತಣಕು ಮಂಡಲದ ಪೈಡಿಪುರ ನಿವಾಸಿ ಬಂಡಿ ದುರ್ಗಾಪ್ರಸಾದ ಅಲಿಯಾಸ ದೊಂಗನಾನಿ (34) ಎಂಬುವವರನ್ನು ಸೆ.12 ರಂದು ಬಂಧಿಸಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಹಾಗೂ ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ವೇಳೆ 5 ಪ್ರಕರಣಗಳಲ್ಲಿ ತಾನೇ ಕಳ್ಳತನ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಶಕಗಳಿಂದ ಬಸ್ ಸಂಪರ್ಕ ಕಾಣದ ಕೋಳೂರು: 4 ಕಿಮೀ ನಡದೇ ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು

ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...