ರಾಯಚೂರು | ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಕ್ರಮ; ತನಿಖೆಗೆ ಆಗ್ರಹಿಸಿ ಆ.10ರಂದು ಪ್ರತಿಭಟನೆ

Date:

ದೇವದುರ್ಗ ತಾಲೂಕಿನ ಎಪಿಎಂಸಿ ನಿವೇಶನಗಳ ಹಂಚಿಕೆ, ಪರವಾನಗಿ ನವೀಕರಣದ ಹೆಸರಿನಲ್ಲಿ ಅಕ್ರಮ ನಡೆದಿದೆ. ಆ ಅಕ್ರಮಗಳ ಕುರಿತು ತನಿಖೆಗೆ ಆಗ್ರಹಿಸಿ ಆಗಸ್ಟ್‌ 10ರಂದು ದೇವದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹ ನಾಯಕ ಕಮಲಾಪುರ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, “ಮೂರು ವರ್ಷಗಳಿಗೊಮ್ಮೆ ನವೀಕರಿಸುವ ಪರವಾನಗಿ ನೀಡುವಾಗ ಎಪಿಎಂಸಿ ಕಾಯ್ದೆ ಉಲ್ಲಂಘಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮಾರುಕಟ್ಟೆ ಜಾಗಕ್ಕೆ ಅರ್ಜಿ ಸಲ್ಲಿಸಿದ್ದರೂ ಪರಿಗಣಿಸದೇ, ಪ್ರಭಾವಿಗಳ ಪ್ರಭಾವಕ್ಕೆ ಒಳಗಾಗಿ ಹಂಚಿಕೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಅಕ್ರಮ ನಡೆದಿರುವ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಎಸ್‌ಸಿಎಸ್‌ಟಿ ಸಮೂದಾಯ ಅರ್ಜಿಗಳನ್ನು ಪರಿಗಣಿಸಿ, ಮರು ಹಂಚಿಕೆ ಮಾಡಬೇಕು. ಅಲ್ಲದೆ, ನಾರಾಯಣಪುರ ಬಲದಂಡೆ ಕಾಲುವೆ ವಿತರಣಾ ಕಾಲುವೆ 17 ಮತ್ತು 18ಕ್ಕೆ ನೀರು ಬಾರದೇ ರೈತರು ಕಂಗಾಲಾಗಿದ್ದಾರೆ. ಕೂಡಲೇ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಗಮೇಶ ನಾಯಕ ಮಾತನಾಡಿ, “ಎಪಿಎಂಸಿಯ ನಿವೇಶನಗಳಿಗೆ 88 ಅರ್ಜಿ ಸಲ್ಲಿಕೆಯಾಗಿವೆ. ಕೆವಲನ್ನು ಮಾತ್ರ ಪರಿಗಣಿಸಿ ಎಸ್‌ಸಿ/ಎಸ್‌ಟಿ ಸಮೂದಾಯದವರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ನಿಯಮ ಬಾಹಿರವಾಗಿ ಹಂಚಿಕೆ ಮಾಡಲಾಗಿದ್ದು, ಆ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಜಿದ್ ಹುಸೇನ್, ಶಿವಪ್ಪ, ಧರ್ಮರೆಡ್ಡಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತ; ಪ್ರಕರಣ ದಾಖಲಿಸಲು ಎಸ್ಎಫ್ಐ‌ ಒತ್ತಾಯ

ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತವಾದ ಬಗ್ಗೆ ಪ್ರಕರಣ ದಾಖಲಿಸಲು ಎಸ್ಎಫ್ಐ‌ ಕಾರ್ಯಕರು...

ರಾಯಚೂರು | ಹೊಸ ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಸಾತಿಗೆ ಸಿಪಿಐ(ಎಂ) ಆಗ್ರಹ

ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಸ್, ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ಮತಾಂಧ ದಾಳಿಗಳ...

ರಾಯಚೂರು | ಶಾಲೆಯ ಹೊಸ ಕೊಠಡಿಯ ಮೇಲ್ಛಾವಣಿ ಕುಸಿತ; ವಿದ್ಯಾರ್ಥಿಯ ತಲೆಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ...

ರಾಯಚೂರು | ದಾಳಿ ಮಾಡಿದ ಚಿರತೆಯನ್ನೇ ಕೊಂದ ಗ್ರಾಮಸ್ಥರು!

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ಮೂರು ತಿಂಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆಯನ್ನು...