ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

Date:

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸದ ವಿಚಾರವಾಗಿದೆ. ಅವರು ಸುದೀರ್ಘ ಕಾಲದಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

- Advertisement -

ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಪದಗ್ರಹಣ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಹಾಗೂ ಐತಿಹಾಸಿಕ ಹಿನ್ನೆಲೆಯಿದ್ದು, ದೇಶದ ಸ್ವಾತಂತ್ರ‍್ಯ ಹೋರಾಟದಿಂದಲೂ ಪಕ್ಷ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ‍್ಯಾ ನಂತರವೂ ಹಲವು ದಶಕಗಳ ಕಾಲ ದೇಶದ ಆಡಳಿತದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದೆ. ಇಂತಹ ಹಿನ್ನೆಲೆ ಹೊಂದಿರುವ ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವುದು ಪ್ರತಿಯೊಬ್ಬ ಮುಖಂಡ ಹಾಗೂ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು. ಬೂತ್ ಮಟ್ಟದಿಂದ ಗ್ರಾಮ, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದವರೆಗೆ ಪಕ್ಷದ ಸಂಘಟನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಕೆ. ಶಾಂತಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ. ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಮಾತನಾಡಿ, ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಸೇವೆ ಸಲ್ಲಿಸುವವರು ಅವಕಾಶಗಳಿಗಾಗಿ ಕಾಯದೆ, ತಮ್ಮ ಸಾಮರ್ಥ್ಯ ಹಾಗೂ ಸಂಘಟನಾ ಶಕ್ತಿಯನ್ನು ಸಾಬೀತುಪಡಿಸುವ ಮೂಲಕ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಶಾಂತಪ್ಪ ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ದೊರೆತಿರುವುದು ಅವರ ಸಂಘಟನಾ ಶಕ್ತಿ ಹಾಗೂ ಪಕ್ಷಕ್ಕಾಗಿ ಸಲ್ಲಿಸಿರುವ ಸೇವೆಗೆ ದೊರೆತ ಗೌರವವಾಗಿದೆ. ಕಾಂಗ್ರೆಸ್ ಪಕ್ಷವು ಗಟ್ಟಿಯಾದ ತತ್ವ, ಸಿದ್ಧಾಂತ ಹಾಗೂ ಸರ್ವರಿಗೂ ಸಮಾನ ಅವಕಾಶದ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದ ವೈವಿಧ್ಯತೆ, ಬಹುತ್ವ ಮತ್ತು ಎಲ್ಲ ವರ್ಗಗಳ ಸಮಾನ ಹಕ್ಕುಗಳನ್ನು ಗೌರವಿಸುವ ಸಂವಿಧಾನದ ಆಶಯಗಳನ್ನು ಪಕ್ಷದ ನೀತಿ, ಸಿದ್ಧಾಂತಗಳಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದರು.

ಪಕ್ಷದ ಸಂಘಟನೆಯಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದರೂ, ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್ ಪಕ್ಷವು ಸಂದರ್ಭಾನುಸಾರ ಗುರುತಿಸಿ ಜವಾಬ್ದಾರಿಗಳನ್ನು ನೀಡಿದೆ. ಎಲ್ಲರಿಗೂ ಒಂದೇ ಸಂದರ್ಭದಲ್ಲಿ ಅವಕಾಶ ಸಿಗುವುದು ಸಾಧ್ಯವಿಲ್ಲ. ಹೀಗಾಗಿ ಕಾರ್ಯಕರ್ತರು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಕಾರ್ಯಕ್ರಮದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಶಾಸಕ ಹಂಪಯ್ಯ ನಾಯಕ, ಎಂಎಲ್‌ಸಿ ಬಸನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ಮಹಮದ್ ಶಾಲಂ, ಕೆ. ಅಸ್ಲಂ ಪಾಷಾ, ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಜಯಣ್ಣ, ಸಾಜೀದ್ ಸಮೀರ್, ಗಫೂರ್‌ಸಾಬ, ಶ್ರೀದೇವಿ ನಾಯಕ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆಗೆ ಉದ್ಯೋಗ ನಿಧಿ ಬಲ: ಕೈಗಾರಿಕೆಗಳಿಗೆ ಉತ್ತೇಜನ, ಯುವಜನರಿಗೆ ಉದ್ಯೋಗದ ನಿರೀಕ್ಷೆ

ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ...

ಹಿರೇಕೆರೂರು ತಾಲೂಕಿಗೆ ಬರಗಾಲ ಘೋಷಣೆ ಮಾಡದಿದ್ದರೆ, ಜನಪ್ರತಿನಿಧಿಗಳಿಗೆ ಪ್ರವೇಶ ಇಲ್ಲ: ರೈತ ಸಂಘ ಎಚ್ಚರಿಕೆ

ಹಾವೇರಿ ಜಿಲ್ಲೆಯ ಏಳು ತಾಲೂಕುಗಳನ್ನೂ ಬರಪೀಡಿತ ಪಟ್ಟಿಯಲ್ಲಿ ಘೋಷಣೆ ಮಾಡಿ, ಹಿರೇಕೆರೂರು...

ತೇರದಾಳ | ಜನರ ಬಳಿಗೆ ಸರ್ಕಾರ: 418 ಅಹವಾಲು ಸ್ವೀಕಾರ, 12ಕ್ಕೆ ಪರಿಹಾರ

ಜನರನ್ನು ಅಧಿಕಾರಿಗಳ ಕಚೇರಿಗೆ ಅಲೆದಾಡಿಸದೆ, ಅವರ ಬಳಿಗೇ ತೆರಳಿ ಅಹವಾಲು ಆಲಿಸಿ...

ಕೋಲಾರ | ಕೋಮುಲ್‌ನಿಂದಲೇ ಪಶು ಆಹಾರ ಘಟಕ ಆರಂಭಕ್ಕೆ ಕ್ರಮ: ನಂಜೇಗೌಡ

ಕೋಮುಲ್ ನೇತೃತ್ವದಲ್ಲಿಯೇ ಪಶು ಆಹಾರ ಘಟಕ ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು,...