ರಾಯಚೂರು | ಏಮ್ಸ್ ಮಂಜೂರಿಗೆ ಕೇಂದ್ರ, ರಾಜ್ಯ ಸರ್ಕಾರಗಳ ತಾರತಮ್ಯ; ಕರವೇ ಖಂಡನೆ

Date:

ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ ಎಚ್ಚರಿಸಿದರು.

ಏಮ್ಸ್ ಮಂಜೂರಾತಿ ಹೋರಾಟ ಸಮಿತಿ ಪ್ರತಿಭಟನೆ ಇಂದು (ಜ.17) 615ನೇ ದಿನಕ್ಕೆ ಕಾಲಿಟ್ಟಿದ್ದು. ಸ್ಥಳಕ್ಕೆ ಆಗಮಿಸಿದ್ದ ಅವರು ಹೋರಾಟಕ್ಕೆ ಬೆಂಬಲ ಘೋಷಿಸಿ ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್, ಚಿನ್ನ, ಭತ್ತ, ಹತ್ತಿ ನೀಡುವ ಜಿಲ್ಲೆಯ ಜನರ ತ್ಯಾಗವನ್ನು ಸರ್ಕಾರಗಳು ಉಡಾಫೆಯಾಗಿ ಪರಿಗಣಿಸಬಾರದು.

ಜಿಲ್ಲೆಯ ಜನರು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಏಮ್ಸ್‌ನಂತಹ ಸಂಸ್ಥೆಗಳು ಮಂಜೂರಿಯಾದರೆ ಆರೋಗ್ಯ ಸಮಸ್ಯೆಗಳೊಂದಿಗೆ ಇಲ್ಲಿಯ ಜನರಿಗೆ ಉದ್ಯೋಗ ದೊರೆಯಲು ಸಹಕಾರಿಯಾಗುತ್ತದೆ. ರಾಜಕೀಯ ಪಕ್ಷಗಳು ಏಮ್ಸ್ ಮಂಜೂರಾತಿ ವಿಷಯದಲ್ಲಿ ರಾಜಕೀಯ ಮಾಡದೇ ತಾರತಮ್ಯ ಮಾಡದೇ ಕೂಡಲೇ ಮಂಜೂರಾತಿಗೆ ಮುಂದಾಗಬೇಕು. ಇಲ್ಲದೇ ಹೋದರೆ ಹೋರಾಟ ರಾಜ್ಯದಾದ್ಯಂತ ವಿಸ್ತರಿಸುವ ಜೊತೆಗೆ, ಏನೆ ಅನಾಹುತ ಸಂಭವಿಸಿದರೂ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಡಾ.ಬಸವರಾಜ ಕಳಸ, ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ ಜೈನ್, ಜಾನ ವೆಸ್ಲಿ, ಡಾ. ಎಸ್.ಎಸ್.ಪಾಟೀಲ್, ರಮೇಶ ಕಲ್ಲೂರು, ಆರಿಫ್‌ಮಿಯಾ, ದೇವೆಂದ್ರಪ್ಪ, ವೆಂಕಯ್ಯ ಶೆಟ್ಟಿ,ಮಲ್ಲನಗೌಡ ಸೇರಿದಂತೆ ರಕ್ಷಣಾ ವೇದಿಕೆ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...