ಆರ್‌ಎಸ್‌ಎಸ್‌ಗೆ ನೂರು ವರ್ಷದ ಇತಿಹಾಸವಿದ್ದು, ದೇಶದ ಸ್ವಾತಂತ್ರ್ಯಕ್ಕೂ ಮುನ್ನವೇ ಈ ಸಂಘಟನೆ ಸ್ಥಾಪನೆಯಾಗಿದೆ. ಆರ್‌ಎಸ್‌ಎಸ್ ಸಂಘಟನೆ ಕುರಿತು ಮಾತನಾಡಲು ಯಾರಿಗೂ ಹಕ್ಕಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖರ್ಗೆ ಅವರು ಆರ್‌ಎಸ್‌ಎಸ್ ಕುರಿತು ಪದೇಪದೇ ಮಾತನಾಡುವ ಮೂಲಕ ತಮ್ಮ ಹೆಸರು ಹಾಗೂ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಡ್ಡ ಮತದಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಡ್ಡ ಮತ ಹಾಕುವ ಪ್ರಶ್ನೆಯೇ ಇಲ್ಲ ಎಂದರು. ಕಾಂಗ್ರೆಸ್ ಪಕ್ಷವು ತಮ್ಮ ಶತಬದ್ಧ ವೈರಾಗಿದ್ದು, ಬರಬೇಕಿದ್ದ ನೂರಾರು ಕೋಟಿ ರೂಪಾಯಿ ಅನುದಾನಗಳನ್ನು ತಡೆಹಿಡಿದಿದೆ ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಗಾಂಜಾ ಮಾರಾಟ; ಮೂವರ ಬಂಧನ
ಬಿಜೆಪಿ ಪಕ್ಷವು ತಮಗೆ ಉತ್ತಮ ಸ್ಥಾನಮಾನ ನೀಡಿದ್ದು, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಮುಂದೆಯೂ ದುಡಿಯುವುದಾಗಿ ತಿಳಿಸಿದರು.




