ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

Date:

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಕೆಕೆಆರ್‌ಟಿಸಿ ಬಸ್‌ನ್ನು ಜಪ್ತಿ ಮಾಡಲಾಗಿದೆ.

- Advertisement -

ಚಿಕ್ಕಹಣಗಿ ಗ್ರಾಮದ ಬಸವರಾಜ ಶೆಟ್ಟಿ ಅವರ ಪುತ್ರ ವಿನೋದ್ ಅವರು ಹಿರೇಹಣಗಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ನಿಂತಿದ್ದಾಗ, ಕೆಎ-36 ಎಫ್ 1377 ನೋಂದಣಿ ಸಂಖ್ಯೆಯ ಕೆಕೆಆರ್‌ಟಿಸಿ ಬಸ್‌ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದು ಡಿಕ್ಕಿ ಹೊಡೆದಿತ್ತು. ಪರಿಣಾಮ ವಿನೋದ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೊದಲು ರಾಯಚೂರಿನ ಬಾಲಂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಕರೆದೊಯ್ಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ಈ ಅಪಘಾತಕ್ಕೆ ಸಂಬಂಧಿಸಿದಂತೆ ವಿನೋದ್ ಅವರು ಎಂವಿಸಿ 296/2023ರ ಅಡಿಯಲ್ಲಿ ಕೆಕೆಆರ್‌ಟಿಸಿ ರಾಯಚೂರು ವಿಭಾಗದ ವಿಭಾಗೀಯ ಸಂಚಾರ ನಿಯಂತ್ರಕರ ವಿರುದ್ಧ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2024ರ ಏಪ್ರಿಲ್ 5ರಂದು ಪರಿಹಾರ ಪಾವತಿಸುವಂತೆ ಆದೇಶಿಸಿತ್ತು. ಆದರೆ, ಪರಿಹಾರ ಪಾವತಿಯಾಗದ ಹಿನ್ನೆಲೆಯಲ್ಲಿ ಅರ್ಜಿದಾರರು ತೊಂದರೆ ಅನುಭವಿಸುವಂತಾಗಿತ್ತು.

ಈ ಹಿನ್ನೆಲೆಯಲ್ಲಿ 2026ರ ಜನವರಿ 13ರಂದು ನ್ಯಾಯಾಲಯವು ಬಸ್ ಜಪ್ತಿ ಮಾಡಲು ಆದೇಶಿಸಿತ್ತು. ಅದರಂತೆ ನ್ಯಾಯಾಲಯದ ಬೇಲಿಫ್‌ಗಳಾದ ಮಾನಪ್ಪ ಹಾಗೂ ಸಾಬಣ್ಣ ಅವರು ಬಸ್‌ನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ಈ ಸಂದರ್ಭದಲ್ಲಿ ವಕೀಲರಾದ ಅರುಣಕುಮಾರ, ಕರಿಯಪ್ಪ ಹಾಗೂ ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ಈಗಾಗಲೇ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಭತ್ತದ ಬೆಳೆ ಉಳಿಸಲು ತಕ್ಷಣ...