ನಿವೇಶನ ರಹಿತ ಬಡ ಕುಟುಂಬಗಳಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಲಿಂಗಸುಗೂರು ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ವೀರಾಪುರ ಹಾಗೂ ರೋಡಲಬಂಡಾ ಗ್ರಾಮಗಳ ನಿವಾಸಿಗಳು ಮತ್ತು ರೈತ ಸಂಘದ ಮುಖಂಡರು ಸಂಬಂಧಪಟ್ಟ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಂಗಪ್ಪ ಎಂ ವೀರಾಪುರ ಮಾತನಾಡಿ, ಹಲವು ವರ್ಷಗಳಿಂದ ಬಡ ಕುಟುಂಬಗಳು ಒಂದೇ ಮನೆಯಲ್ಲಿ ಅವೈಜ್ಞಾನಿಕ ಹಾಗೂ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿವೆ. ನಿವೇಶನ ಮತ್ತು ಸ್ವಂತ ಮನೆ ಇಲ್ಲದ ಕಾರಣ ಅನೇಕ ಕುಟುಂಬಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ತಿಳಿಸಿದರು.
ಸರ್ಕಾರದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ಮನೆಗಳನ್ನು ಮಂಜೂರು ಮಾಡಬೇಕೆಂದು ಸ್ಥಳೀಯರು ಹಲವು ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು.
ಕೂಡಲೇ ಗ್ರಾಮಸಭೆ ನಡೆಸಿ, ಗ್ರಾಮ ಪಂಚಾಯಿತಿಯ ಆನ್‌ಲೈನ್ ವ್ಯವಸ್ಥೆ ಮೂಲಕ ಅರ್ಹ ಕುಟುಂಬಗಳ ಅರ್ಜಿಗಳನ್ನು ದಾಖಲಿಸಿ, ಸರ್ಕಾರದ ವಸತಿ ಯೋಜನೆಗಳ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸುದ್ದಿಯ ಒತ್ತಡದ ನಡುವೆಯೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಪೂವಿತಾ ಎಸ್
ಈ ವೇಳೆ ವನಜಾಕ್ಷಿ, ಪಂಚಲಯ್ಯ, ರಜಿಯಾ, ಮಹಾಂತೇಶ್, ವೆಂಕಟೇಶ್ ಇನ್ನಿತರರು ಇದ್ದರು.




