ರಾಯಚೂರು | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲು ಕೆಆರ್‌ಎಸ್ ಆಗ್ರಹ

Date:

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಜೊತೆಗೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ನಗರದ ನೂತನ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಲಿತರು ಹಾಗೂ ಮಹಿಳೆಯರ ಮೇಲೆ ಸರಣಿ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿರವಾರ ತಾಲ್ಲೂಕಿನ ಹೋಕ್ರಾಣಿ ಗ್ರಾಮದ ದಲಿತ ವಿದ್ಯಾರ್ಥಿನಿ ಅಶ್ವಿನಿ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ, ಲಿಂಗಸುಗೂರು ತಾಲ್ಲೂಕಿನ ಕರಡಕಲ್ ಗ್ರಾಮದಲ್ಲಿ ನಾಪತ್ತೆಯಾಗಿದ್ದ ರಾಣೆಮ್ಮ ಅವರ ಅತ್ಯಾಚಾರ ಹಾಗೂ ಹತ್ಯೆ ಮತ್ತು ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದ ದಲಿತ ಯುವಕ ಭೂಮಾನಂದ ಅವರ ಬರ್ಬರ ಕೊಲೆ ಪ್ರಕರಣಗಳ ಆರೋಪಿಗಳನ್ನು ಕೂಡಲೇ ಬಂಧಿಸಿ, ತ್ವರಿತಗತಿಯ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಶಾರ್ಟ್ ಸರ್ಕ್ಯೂಟ್‌ಗೆ ದನಗಳ ಶೆಡ್ ಬೆಂಕಿಗಾಹುತಿ: 4 ಎಮ್ಮೆ, ಎತ್ತು ಸಾವು

ಪ್ರತಿಭಟನೆಯಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಕೆ.ಎಸ್., ಜಿಲ್ಲಾ ಅಧ್ಯಕ್ಷ ವಿಜಯ ಪೋಳ್, ಜಿಲ್ಲಾ ಕಾರ್ಯಾಧ್ಯಕ್ಷ ಕೃಷ್ಣ ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಹೂಗಾರ್, ವೆಂಕಟೇಶ, ಶಂಕರಗೌಡ, ದ್ಯಾವಣ್ಣ ನಾಯಕ, ಬಸವರಾಜಯ್ಯ ಸ್ವಾಮಿ, ಗಂಗಪ್ಪ ಕಬೀರ್, ಸಾಬಣ್ಣ, ಮಹಾದೇವಮ್ಮ, ಬಸವಪ್ರಭು, ಗಂಗಾ ಕೆ. ನಾಯಕ, ಪಾಯ ಗಣೇಶ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...