ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು ಘಟನೆ ರಾಯಚೂರು ತಾಲೂಕಿನ ಸುಲ್ತಾನಪುರ ಸಮೀಪ ನಡೆದಿದೆ.
ಮೃತ ಯುವಕ ರಮೇಶ ನಾಯಕ (30) ಎಂದು ಗುರುತಿಸಲಾಗಿದೆ.
ಬಸ್ ರಾಯಚೂರಿನಿಂದ ದೇವದುರ್ಗ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹಿಂಬದಿಯಿಂದ ಬೈಕ್ ಡಿಕ್ಕಿ: ಪಾದಚಾರಿ ಸಾವು, ಬೈಕ್ ಸವಾರ ಗಾಯ
ಘಟನೆಯ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




