ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

Date:

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಅಧ್ಯಯನಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

- Advertisement -

ಗ್ರಾಮದ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಯುವಜನರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಗ್ರಂಥಾಲಯವನ್ನು ಬಳಸಲಾಗುತ್ತಿದೆ. ಪ್ರತಿನಿತ್ಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿ ಓದುತ್ತಿದ್ದಾರೆ. ಆದರೆ ಅಗತ್ಯ ಸೌಲಭ್ಯಗಳ ಕೊರತೆಯಿಂದ ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳಿಗೆ ನಿರೀಕ್ಷಿತ ವಾತಾವರಣ ದೊರೆಯುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಗ್ರಂಥಾಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿದೆ. ದೂರದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಗಂಟೆಗಟ್ಟಲೆ ಗ್ರಂಥಾಲಯದಲ್ಲಿ ಕುಳಿತು ಓದುತ್ತಿರುವ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಹೊರಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಗ್ರಂಥಾಲಯದ ಕಿಟಕಿಗಳು ಸರಿಯಾದ ಸ್ಥಿತಿಯಲ್ಲಿಲ್ಲ. ವಿದ್ಯುತ್ ಸಂಪರ್ಕವಿದ್ದರೂ ಗ್ರಂಥಾಲಯದಲ್ಲಿರುವ ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಬಿಸಿಲಿನ ವಾತಾವರಣದಲ್ಲಿಯೂ ವಿದ್ಯಾರ್ಥಿಗಳು ಕುಳಿತು ಓದುವಂತಾಗಿದೆ. ಶಾಖದ ನಡುವೆಯೇ ಓದಬೇಕಾದ ಪರಿಸ್ಥಿತಿ ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟುಮಾಡುತ್ತಿದೆ.

1000003322

ಗ್ರಂಥಾಲಯದಲ್ಲಿರುವ ಕಂಪ್ಯೂಟರ್‌ಗಳ ಸ್ಥಿತಿಯೂ ಶೋಚನೀಯವಾಗಿದೆ. ಕಂಪ್ಯೂಟರ್‌ಗಳು ಕಾರ್ಯನಿರ್ವಹಿಸದೆ ಧೂಳು ಹಿಡಿದಿದ್ದು, ವಿದ್ಯಾರ್ಥಿಗಳ ಬಳಕೆಗೆ ಸಿಗುತ್ತಿಲ್ಲ. ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆನ್‌ಲೈನ್ ಅಧ್ಯಯನ, ಅರ್ಜಿ ಸಲ್ಲಿಕೆ, ಮಾಹಿತಿ ಸಂಗ್ರಹ ಸೇರಿದಂತೆ ಹಲವು ಕೆಲಸಗಳಿಗೆ ಕಂಪ್ಯೂಟರ್ ಅಗತ್ಯವಿದೆ. ಆದರೆ ಗ್ರಂಥಾಲಯದಲ್ಲಿರುವ ಕಂಪ್ಯೂಟರ್‌ಗಳು ಬಳಕೆಗೆ ಬಾರದಿರುವುದರಿಂದ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ಗ್ರಂಥಾಲಯದಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆಯೂ ಇಲ್ಲ. ಪ್ರತಿನಿತ್ಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭೇಟಿ ನೀಡುವ ಸ್ಥಳವಾಗಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸುವ ಅಗತ್ಯವಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಗ್ರಂಥಾಲಯಗಳು ಪ್ರಮುಖ ಆಧಾರವಾಗಿವೆ. ಪುಸ್ತಕಗಳು, ಪತ್ರಿಕೆಗಳು, ಅಧ್ಯಯನಕ್ಕೆ ಸೂಕ್ತ ವಾತಾವರಣ ಹಾಗೂ ಡಿಜಿಟಲ್ ಸೌಲಭ್ಯಗಳು ದೊರೆತರೆ ಗ್ರಾಮೀಣ ವಿದ್ಯಾರ್ಥಿಗಳಿಗೂ ಉತ್ತಮ ಅವಕಾಶ ಸಿಗಲಿದೆ. ಆದರೆ ಮೂಲಸೌಕರ್ಯಗಳ ಕೊರತೆಯಿಂದ ಗ್ರಂಥಾಲಯದ ಉದ್ದೇಶವೇ ಕುಂಠಿತವಾಗುತ್ತಿದೆ.

ಗ್ರಂಥಾಲಯಕ್ಕೆ ಕುಡಿಯುವ ನೀರು, ಫ್ಯಾನ್‌ಗಳ ದುರಸ್ತಿ, ಕಿಟಕಿಗಳ ದುರಸ್ತಿ, ಕಂಪ್ಯೂಟರ್‌ಗಳ ದುರಸ್ತಿ ಅಥವಾ ಹೊಸ ಕಂಪ್ಯೂಟರ್‌ಗಳ ವ್ಯವಸ್ಥೆ, ಸಿಸಿ ಕ್ಯಾಮೆರಾ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ತಕ್ಷಣ ಕಲ್ಪಿಸಬೇಕು. ವಿದ್ಯಾರ್ಥಿಗಳು ಶಾಂತಿಯುತವಾಗಿ ಹಾಗೂ ಸುರಕ್ಷಿತ ವಾತಾವರಣದಲ್ಲಿ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯತ್ ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಗ್ರಹವಾಗಿದೆ.

1000003324

ಈ ಬಗ್ಗೆ ಸ್ಥಳೀಯ ನಿವಾಸಿ ಎ. ಶರಣಕುಮಾರ ಮುದ್ದಮಗುಡ್ಡಿ ಮಾತನಾಡಿ, ಕರ್ನಾಟಕ ಸರ್ಕಾರ ಈಗಾಗಲೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಪೊತ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ಆರೋಪಿಸಿದರು.

ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಗತ್ಯವಿರುವ ದಿನಪತ್ರಿಕೆ, ಮಾಸಪತ್ರಿಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು ಲಭ್ಯವಿಲ್ಲ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಯುವಕರು ಅಗತ್ಯ ಅಧ್ಯಯನ ಸಾಮಗ್ರಿಗಳಿಗಾಗಿ ಬೇರೆಡೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯದಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಅಧ್ಯಯನ ಸಾಮಗ್ರಿಗಳ ಸಮಸ್ಯೆ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಗಮನಕ್ಕೆ ತಂದಿದ್ದರೂ, ಈವರೆಗೆ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸದೆ ಅಧಿಕಾರಿಗಳು ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1000003326

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯದಲ್ಲಿ ಅಗತ್ಯ ಪುಸ್ತಕಗಳು, ದಿನಪತ್ರಿಕೆ, ಮಾಸಪತ್ರಿಕೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕೂಡಲೇ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ನೆರವಾಗಬೇಕಾದ ಗ್ರಂಥಾಲಯವೇ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವುದು ವ್ಯವಸ್ಥೆಯತ್ತ ಪ್ರಶ್ನೆ ಮೂಡಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಗ್ರಂಥಾಲಯವನ್ನು ವಿದ್ಯಾರ್ಥಿಗಳ ಬಳಕೆಗೆ ಸಂಪೂರ್ಣವಾಗಿ ಸಜ್ಜುಗೊಳಿಸಬೇಕಿದೆ.

ಈ ಸುದ್ದಿ ಓದಿದ್ದೀರಾ? ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ತಹಶೀಲ್ದಾರ್ ಖಾಲಿದ್ ಅಹ್ಮದ ಮಾತನಾಡಿ, ಗ್ರಂಥಾಲಯದಲ್ಲಿರುವ ಕುಡಿಯುವ ನೀರು, ಫ್ಯಾನ್ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...