ರಾಯಚೂರು | ವಸತಿನಿಲಯಗಳಲ್ಲಿ ಮೂಲ ಸೌಕರ್ಯ ಕೊರತೆ; ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Date:

Advertisements

ರಾಯಚೂರು ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿರುವ ಮೂಲ ಸೌಕರ್ಯಗಳ ಕೊರತೆ ಪಟ್ಟಿ ಮಾಡಿ ಪರಿಹಾರ ಒದಗಿಸಲು ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್ ಎಸ್ ಬೋಸರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಜಲ ನಿರ್ಮಲ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆಯ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸುವುದು ಆಯಾ ಇಲಾಖೆ ಹಾಗೂ ಸರ್ಕಾರದ ಜವಾಬ್ದಾರಿಯಾಗಿದ್ದು, ಅಧಿಕಾರಿಗಳು ವಸತಿ ನಿಲಯಗಳಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಶ್ರಮ ವಹಿಸಬೇಕು” ಎಂದು ತಿಳಿಸಿದರು.

Advertisements

“ವಸತಿ ನಿಲಯಗಳ ನಿರ್ಮಾಣಕ್ಕೆ ಇರುವ ಕಂದಾಯ ಜಮೀನುಗಳು ಅಥವಾ ಖರೀದಿಸಲಾಗುವ ಜಮೀನುಗಳು ರಸ್ತೆ ಸಂಪರ್ಕವನ್ನು ಹೊಂದಿರುವಂತೆ ನೋಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆಯಾದಾಗ ಅಥವಾ ತುರ್ತು ಸಂದರ್ಭಗಳಿಗೆ ಅನುಕೂಲವಾಗುತ್ತದೆ. ವಸತಿ ನಿಲಯಗಳಿಗೆ ಬರುವ ಸಿಬ್ಬಂದಿಗಳಿಗೆ ಹಾಗೂ ಪರಿಶೀಲನೆಗೆ ತೆರಳಲು ಅನುಕೂಲವಾಗಲಿದೆ” ಎಂದರು.

“ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ಬಳಕೆಯ ನೀರು, ವಿದ್ಯುತ್, ಊಟದ ವ್ಯವಸ್ಥೆ ಸರಿಯಾಗಿ ಗುಣಮಟ್ಟದಿಂದ ಒದಗಿಸಬೇಕು. ಜಿಲ್ಲೆಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.

“ನಗರದಲ್ಲಿ ಕುಡಿಯುವ ನೀರು, ವಿದ್ಯುತ್ ದೀಪ, ರಸ್ತೆ, ಕಸ ವಿಲೇವಾರಿ ಸೇರಿದಂತೆ ಇತರ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ನಗರಸಭೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಮಾತನಾಡಿ, “ಸಮಸ್ಯೆಗಳಿರುವ ವಸತಿನಿಲಯಗಳ ಪಟ್ಟಿ ಮತ್ತು ಸಮಸ್ಯೆಗಳ ಪಟ್ಟಿಗಳನ್ನು ಸಿದ್ದಪಡಿಸಬೇಕು. ಸ್ಥಳೀಯ ಮಟ್ಟದಲ್ಲಿ ಪರಿಹಾರ ನೀಡಬಹುದಾದ ಸಮಸ್ಯೆಗಳನ್ನು ಬಗೆಹರಿಸಿ ಅನುದಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮುಂಗಾರು ವಿಳಂಬ, ಜಲಾಶಯದ ನೀರಿನ ಮಟ್ಟ ಇಳಿಕೆ; ಭತ್ತದ ಕೃಷಿ ಕೈಬಿಟ್ಟ ರೈತರು

ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ, ಅಪರ ಜಿಲ್ಲಾಧಿಕಾರಿ ಡಾ.ಕೆ ಆರ್ ದುರುಗೇಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ರಾಯಚೂರು ಸಹಾಯಕ ಆಯುಕ್ತೆ ಮಹಿಬೂಬಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ, ಜೆಸ್ಕಾಂ ಅಧಿಕಾರಿ ಚಂದ್ರಶೇಖರ ದೇಸಾಯಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಾಲ್ಮೀಕಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಉಗ್ಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X