ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

Date:

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಗಳ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಅಮಾನತುಗೊಳಿಸಿ ಆದೇಶಿಸಲಾಗಿದೆ.

- Advertisement -

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕರವಸೂಲಿಗಾರರ ಅನುಮೋದನೆಯನ್ನು ರದ್ದುಗೊಳಿಸಲಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸುವ ಕುರಿತು ಇಲಾಖಾ ವಿಚಾರಣೆ ನಡೆಸಲು ಆದೇಶಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಮಾನತುಗೊಂಡವರಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯಿತಿಯ ಪ್ರಭಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತೀನುದ್ದೀನ್ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುಕುಮಾರ್ ಸೇರಿದ್ದಾರೆ. ಜೊತೆಗೆ ಶಾವಂತಗೇರಾ ಗ್ರಾಮದ ಕರವಸೂಲಿಗಾರ ರಾಜಶೇಖರ ಹಾಗೂ ಸಾದಾಪುರ ಗ್ರಾಮದ ಕರವಸೂಲಿಗಾರರಾದ ಹೇಮಣ್ಣ ಮತ್ತು ಹನುಮಂತರಾಯ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಸಾದಾಪುರ ಗ್ರಾಮ ಪಂಚಾಯಿತಿಯ ಒಟ್ಟು ತೆರಿಗೆ ಬೇಡಿಕೆ 31,89,780.68 ರೂ. ಇದ್ದು, ಇದರಲ್ಲಿ ಕೇವಲ 55,246.67 ರೂ. ಮಾತ್ರ ವಸೂಲಿಯಾಗಿದೆ. ಅದೇ ರೀತಿ, ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ 28,78,086.78 ರೂ. ತೆರಿಗೆ ಬೇಡಿಕೆ ಇದ್ದರೂ, 1,56,328 ರೂ. ಮಾತ್ರ ವಸೂಲಿಯಾಗಿದೆ.

ಜಿಲ್ಲೆಯಲ್ಲೇ ಈ ಎರಡೂ ಗ್ರಾಮ ಪಂಚಾಯಿತಿಗಳ ತೆರಿಗೆ ವಸೂಲಾತಿ ಪ್ರಗತಿ ಅತ್ಯಂತ ಕಡಿಮೆ ಮಟ್ಟದಲ್ಲಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ತೆರಿಗೆ ವಸೂಲಾತಿ ಹೆಚ್ಚಿಸಲು ಹಲವು ಬಾರಿ ಸೂಚನೆ ನೀಡಿದ್ದರೂ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ ಹಾಗೂ ಮೇಲಾಧಿಕಾರಿಗಳ ನಿರ್ದೇಶನಗಳನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 3ರ ಅನ್ವಯ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಅದೇ ವೇಳೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ ಸಿಬ್ಬಂದಿಯ ಸ್ವರೂಪ, ವೇತನ, ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರೆ ಸೇವಾ ಷರತ್ತುಗಳು) ನಿಯಮಗಳು, 2020ರ ನಿಯಮ 8ರ ಅನ್ವಯ ಮೂವರು ಕರವಸೂಲಿಗಾರರ ಸಿಬ್ಬಂದಿಯ ಅನುಮೋದನೆಯನ್ನು ರದ್ದುಗೊಳಿಸಿ, ಸೇವೆಯಿಂದ ವಜಾಗೊಳಿಸುವ ಸಂಬಂಧ ಇಲಾಖಾ ವಿಚಾರಣೆ ನಡೆಸಲು ಆದೇಶಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...