ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಕಂಡ ಶಿಕ್ಷಣವಂತ ಹಾಗೂ ಸಮಾನತೆಯ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಶಿಕ್ಷಣದ ಅವಕಾಶಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಡಿಡಿಪಿಐ ಜಿ. ಮಲ್ಲಿಕಾರ್ಜುನ ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಸಹಾರಾ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಹಾಗೂ ಆಜಾದ್ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣವು ವ್ಯಕ್ತಿಯ ಬದುಕನ್ನು ರೂಪಿಸುವುದರ ಜೊತೆಗೆ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ ಎಂದರು.
ಮೊಹಮ್ಮದ್ ಅಬ್ದುಲ್ ಯೂನಸ್ ಮಾತನಾಡಿ ಮೌಲಾನಾ ಆಜಾದ್ ಅವರ ಶೈಕ್ಷಣಿಕ ದೂರದೃಷ್ಟಿ, ಸ್ವಾತಂತ್ರ‍್ಯ ಹೋರಾಟದ ಕೊಡುಗೆ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ನಿರ್ಮಾಣದಲ್ಲಿ ಅವರ ಪಾತ್ರ ಹಿರಿದು ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಹಿತಿ ವೀರ ಹನುಮಾನ್, ಇಕ್ಬಾಲ್ ಅಹಮದ್ ಪಿ., ಶೈಕ್ ನಿಜಾಮುದ್ದೀನ್ ಪಟೇಲ್, ಅಂಬಿಕಾ, ಚಾಂದ್ ಬೀ ಹಾಗೂ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಆಜಾದ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪೋತ್ನಾಳ ಗ್ರಂಥಾಲಯಕ್ಕೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳ ಪ್ರತಿಭಟನೆ
ಕಾರ್ಯಕ್ರಮದಲ್ಲಿ ಸಹಾರಾ ಅಧ್ಯಕ್ಷ ಮೊಹಮ್ಮದ್ ಅಬ್ದುಲ್ ಹೈ ಫಿರೋಜ್, ಗೌರವಾಧ್ಯಕ್ಷ ಮೊಹಮ್ಮದ್ ಇಕ್ಬಾಲ್, ಕೃಷ್ಣ ಶವಂತಗೆರಾ, ಡಾ. ಈರಣ್ಣ ಕೋಸಗಿ, ಡಾ. ಸಯ್ಯದ್ ಮಿನ್ಹಾಜುಲ್ ಹಸನ್, ಮಹಬೂಬ್ ಕಲ್ಲೂರು ಸೇರಿದಂತೆ ಉಪಸ್ಥಿತರಿದ್ದರು.



