ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

Date:

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳು ಹೆಚ್ಚಾಗಲಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಕರೆಮ್ಮ ಗೋಪಾಲಕೃಷ್ಣ ಹೇಳಿದರು.

- Advertisement -

ಜಾಲಹಳ್ಳಿ ಗ್ರಾಮದಲ್ಲಿ ಶ್ರೀಲಕ್ಷ್ಮೀ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಗೋವಿಂದ ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ್ದ, ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಬದಲಾದ ಕಾಲಘಟ್ಟದಲ್ಲಿ ನಾವೆಲ್ಲರೂ ಆರ್ಥಿಕ ಪರಿಸ್ಥಿತಿ ತಿಳಿದುಕೊಂಡು, ವಿವಾಹಗಳು ಮಾಡಬೇಕಾದಂತಹ ಅನಿವಾರ್ಯತೆಗಳು ಎದುರಾಗಿವೆ. ರಾಜ್ಯದಲ್ಲಿ ಬಹುತೇಕ ಮಠಗಳು ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಅನ್ನದಾಸೋಹ ಕಾರ್ಯಕ್ರಮಗಳು ನೀಡುತ್ತಿರುವುದು ಬಡಕುಟುಂಬಗಳಿಗೆ ಅನುಕೂಲವಾಗಿವೆ. ನವ ಜೋಡಿಗಳಿಗೆ ಶ್ರೀಗಳು ಕೊಟ್ಟಿರುವ ಸಂದೇಶ ಮಾರ್ಗದಲ್ಲೇ ಜೀವನ ನಡೆಸಬೇಕು. ದುಶ್ಚಟಗಳಿಗೆ ಒಳಗಾಗದೇ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹೇಳಿದರು.

ಪ್ರತಿವರ್ಷದಂತೆ ಈವರ್ಷವೊ ಸಮಿತಿ ಸದಸ್ಯರು ಆಯೋಜಿಸಿದ್ದ ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗಿದೆ. ಪುಣ್ಯ ಕ್ಷೇತ್ರದಲ್ಲಿ ವಿವಾಹಗಳು ಆಗಿರುವಂತಹ ನವ ಜೋಡಿಗಳು ಪುಣ್ಯವಂತರು. ಜಾಲಹಳ್ಳಿ ಗೋವಿಂದ ಸೇವಾ ಸಮಿತಿಯ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವವು ಧಾರ್ಮಿಕ, ಪರಂಪರೆ, ಸಾಮಾಜಿಕ ಸಮಾನತೆ ಮತ್ತು ಜನಸೇವೆಯ ಮಹತ್ವವನ್ನು ಸಾರಿತು. ಗ್ರಾಮಸ್ಥರು ದಾನಿಗಳು, ಮುಖಂಡರು, ವಿವಿಧ ಸಂಘ ಸಂಸ್ತೆಗಳು ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದ್ದು, ಉತ್ತಮ ಸಂದೇಶ ನೀಡಿದೆ ಎಂದು ಹೇಳಿದರು.

ಸರ್ವಧರ್ಮ ಸಾಮೂಹಿಕ ವಿವಾಹಗಳು ಬಡ ಮತ್ತು ಮಾಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆ ಕಡಿಮೆ ಮಾಡುವುದರ ಜೊತೆಗೆ ಸಮಾಜದಲ್ಲಿ ಸಮಾನತೆ ಸಹಬಾಳ್ವೆ ಹಾಗೂ ಸಹಕಾರದ ಮನೋಭಾವ ಬೆಳೆಸುತ್ತಿದೆ. ಇಂತಹ ಜನಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಗ್ರಿಗೋಲ್ಡ್ ಹೂಡಿಕೆದಾರರ ಬಾಂಡ್‌, ರಸೀದಿ ಪರಿಶೀಲನೆಗೆ ಕೇಂದ್ರ ಸ್ಥಾಪನೆ

ಇದೇ ಸಂದರ್ಭದಲ್ಲಿ ರಾಜಶೇಖರ ನಾಯಕ, ವೇಣುಗೋಪಾಲ ನಾಯಕ, ಬಿ.ರಾಮುಲು ಗಲಗ, ರಾಜಾರಂಗಪ್ಪ ನಾಯಕ, ಬಸವರಾಜ ಪಂಪಾಪತಿ, ಬೂತಪ್ಪ ದೇವರಮನಿ, ಡಾ.ಹುಲಿಮನಿ, ತಿಮ್ಮಣ ದಿವಾನ, ರಾಮುನಗೌಡ, ವೀರಣ್ಣ ಪಾಣಿ, ವೀರಣ್ಣ ಬಳೆ, ನಿವೃತ್ತ ಬಿಇಒ ಆರ್‌ ಇಂದಿರಾ, ಕೋಪರೆಸ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...