ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ಜಾಫರ್ ಸಾದಿಕ್ (43) ಎಂಬಾತನನ್ನು ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ, ಜಾಫರ್ ಸಾದಿಕ್ ಸಿಕ್ಕಿ ಬಿದ್ದಿದ್ದಾನೆ. ಆತನಿಂದ 1 ಲೀಟರ್‌ನ 38 ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿದ್ದ ಸಿಎಚ್ ಪೌಡರ್ ಮಿಶ್ರಿತ ಸೇಂದಿ ವಶಪಡಿಸಿಕೊಂಡಿದ್ದಾರೆ. ಕೆಲವರು ಪರಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!
ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



