ಸಾರಿಗೆ ಸಂಸ್ಥೆಯ ಬಸ್ ಹರಿದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟರುವ ವ್ಯಕ್ತಿ ಚಟ್ನಪಲ್ಲಿ ಗ್ರಾಮದ ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಮಂತ್ರಾಲಯದ ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಟ್ನಪಲ್ಲಿ ಗ್ರಾಮದಲ್ಲಿ ಮತ್ತೊಂದು ಬಸ್‌ಗೆ ಸೈಡ್ ನೀಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಈ ವೇಳೆ ರಸ್ತೆ ದಾಟುತ್ತಿದ್ದ ತಿಕ್ಕಯ್ಯ ಎನ್ನುವ ಮೇಲೆ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚಾಲಕನ ನಿರ್ಲಕ್ಷ್ಯ ವಹಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಮಾದವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಾಗಿಸಲಾಗಿದೆ. ಈ ಘಟನೆ ಮಾಧವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




