ಮಸ್ಕಿ ತಾಲ್ಲೂಕು ಪಂಚಾಯಿತಿಯ ನೂತನ ಕಟ್ಟಡವನ್ನು ವೆಂಕಟಾಪುರ ರಸ್ತೆಯ ಪ್ರಜಾಸೌಧದ ಹಿಂಭಾಗದಲ್ಲಿ ಈಗಾಗಲೇ ಗುರುತಿಸಿ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿರುವ ಜಾಗದಲ್ಲಿಯೇ ನಿರ್ಮಿಸಬೇಕು ಎಂದು ಕರ್ನಾಟಕ ಭೀಮ್ ಸೇನೆಯ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈಗಾಗಲೇ ಗುರುತಿಸಿರುವ ಜಾಗವನ್ನು ಬಿಟ್ಟು, ಸಿಂಧನೂರು ರಸ್ತೆಯ ಭಾಗದಲ್ಲಿ ಪಟ್ಟಣದಿಂದ ಸುಮಾರು 3 ಕಿ.ಮೀ. ದೂರದಲ್ಲಿ ಕಟ್ಟಡ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ. ಇದರಿಂದ ಸಾರ್ವಜನಿಕರು, ಮಹಿಳೆಯರು, ವೃದ್ಧರು ಹಾಗೂ ರೈತರಿಗೆ ತೊಂದರೆಯಾಗಲಿದೆ’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈಗಾಗಲೇ ಭೂಮಿಪೂಜೆ ನೆರವೇರಿಸಿರುವ ಜಾಗವನ್ನು ಬಿಟ್ಟು ಬೇರೆಡೆ ಕಟ್ಟಡ ನಿರ್ಮಿಸಲು ಮುಂದಾದರೆ ಕರ್ನಾಟಕ ಭೀಮ್ ಸೇನೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಆತ್ಮಹತ್ಯೆ ತಡೆಗೆ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ: ಆ.31ರಂದು ಸಂತೆಕಲ್ಲೂರಿನಲ್ಲಿ ರೈತ ಜಾಗೃತಿ ಸಮಾವೇಶ
ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಹುಲಿಗೇಶ, ಅಂಬು ಭೋವಿ, ಪ್ರೇಮ್, ಶಿವರಾಜ, ಸಚಿನ್ ಹಾಜರಿದ್ದರು.




