ರಾಯಚೂರು | ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಆಗ್ರಹಿಸಿ ಕಳೆದ 1500 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನಲೆಯಲ್ಲಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಸರ್ಕಲ್ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ಕೈಯಲ್ಲಿ ‘ರಾಯಚೂರಿಗೆ ಏಮ್ಸ್ ಬೇಕು’ ಕಲ್ಯಾಣ್ ಕರ್ನಾಟಕ ಭಾಗದ ಜನತೆಗೆ ಉನ್ನತ ವೈದ್ಯಕೀಯ ಸೌಲಭ್ಯ ಒದಗಿಸಿ’ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ತಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದರು.

109309

ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರಕುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ಸುಮಾರು 4 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ 5 ಬೆಳ್ಳಿ ಕೊಡೆ ಸೇರಿ ಹಲವು ವಸ್ತು ಕಳ್ಳತನ

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...