ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ

Date:

ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ ಆದ್ದರಿಂದ ದೇವಸ್ಥಾನಕ್ಕೆ ಭಕ್ತರು ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.

- Advertisement -

ಕೃಷ್ಣಾ ಮೇಲ್ಬಾಗದಲ್ಲಿ ಉತ್ತಮ ಮಳೆ ಹಿನ್ನೆಲೆ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಡ್ಯಾಮ್ ಭರ್ತಿಯಾಗಲು ಇನ್ನೂ ನಾಲ್ಕು ಟಿಎಂಸಿ ಮಾತ್ರ ಬಾಕಿಯಿದೆ. ಹೀಗಾಗಿ ಸದ್ಯ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ 1.1 ಲಕ್ಷ ಕ್ಯೂಸೆಕ್ ಒಳಹರಿವು ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ: ಸಂಪೂರ್ಣ ಭಸ್ಮ

ಆಲಮಟ್ಟಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹರಿದು ಬಂದರೆ ನಾರಾಯಣಪುರ ಜಲಾಶಯದ ಹೊರ ಹರಿವನ್ನೂ ಕ್ರಮೇಣ ಹೆಚ್ಚಿಸಲಾಗುತ್ತದೆ. ಈಗಾಗಲೇ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆ ಹಂತದಲ್ಲಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿದು ಬಂದರೆ ರಾಯಚೂರು, ಲಿಂಗಸುಗೂರು, ದೇವದುರ್ಗ ತಾಲೂಕಿನಲ್ಲಿ ಹಲವು ಸೇತುವೆಗಳು ಮುಳುಗಡೆಯಾಗಲಿವೆ. ಕೃಷ್ಣೇ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...