ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರಂದು ರಾಯಚೂರು ನಗರದಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವ ಡಾ. ಅಜಯ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಆದೇಶ ಹೊರಡಿಸಿದ್ದಾರೆ.
ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ಶರಣಪ್ರಕಾಶ ಪಾಟೀಲ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿದ್ದರು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸರ್ಕಾರಿ ಆಸ್ಪತ್ರೆಗೆ ಸಮಯಕ್ಕೆ ಹಾಜರಾಗಿ, ರೋಗಿಗಳಿಗೆ ಸೂಕ್ತ ಸೇವೆ ನೀಡಿ: ಬಾದರ್ಲಿ ಸೂಚನೆ
ಸಚಿವ ಸಂಪುಟ ಪುನರ್‌ವ್ಯವಸ್ಥೆಯಾದ ಬಳಿಕ ರಾಯಚೂರು ಜಿಲ್ಲೆಗೆ ಈವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಈ ನಡುವೆ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ಪ್ರಗತಿ ಪರಿಶೀಲನೆಗೆ ಡಾ. ಅಜಯ್ ಸಿಂಗ್ ಅವರನ್ನು ಸರ್ಕಾರ ನೇಮಿಸಿತ್ತು. ಇದೀಗ ಆ.15ರ ಧ್ವಜಾರೋಹಣದ ಜವಾಬ್ದಾರಿಯನ್ನೂ ಅವರಿಗೇ ನೀಡಲಾಗಿದೆ.




