ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್, ಸಂಸದ ಜಿ. ಕುಮಾರ ನಾಯಕ, ಶಾಸಕರಾದ ಜಿ. ಕರಿಯಮ್ಮ ನಾಯಕ ಹಾಗೂ ಜಿ. ಹಂಪಯ್ಯ ನಾಯಕ ಅವರೊಂದಿಗೆ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ಜಿಲ್ಲೆಯಲ್ಲಿ ನಡೆದ ಮೂರು ಕೊಲೆ ಪ್ರಕರಣಗಳ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಅಜಯ್ ಸಿಂಗ್ ಮಾತನಾಡಿ, ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ವರ್ಗಾವಣೆ: ಯಾದಗಿರಿ ಜಿಪಂ ಸಿಇಒ ಆಗಿ ನೇಮಕ
ವಿಧಾನ ಪರಿಷತ್ ಸದಸ್ಯ ಎನ್ ಎಸ್ ಬೋಸರಾಜು, ಮಾನ್ವಿ ಶಾಸಕ ಹಂಪಯ್ಯ ನಾಯಕ, ಸಂಸದರಾದ ಜಿ ಕುಮಾರ್ ನಾಯ್ಕ ಹಾಗೂ ಅಧಿಕಾರಿಗಳು ಇನ್ನಿತರರು ಇದ್ದರು.




