ರಾಯಚೂರು | ಡಾಬಾ, ಹೋಟೆಲ್ ಗಳಲ್ಲಿ ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್ ದುರ್ಬಳಕೆ: 15 ಸಿಲಿಂಡರ್ ವಶಕ್ಕೆ

Date:

ಡೊಮೆಸ್ಟಿಕ್ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮಾನ್ವಿ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ನೇತೃತ್ವದಲ್ಲಿ ಅಧಿಕಾರಿಗಳು ಪಟ್ಟಣದ ವಿವಿಧ ಹೋಟೆಲ್‌ಗಳು ಹಾಗೂ ಡಾಬಾಗಳ ಮೇಲೆ ದಾಳಿ ನಡೆಸಿ 15 ಡೊಮೆಸ್ಟಿಕ್ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡರು.

- Advertisement -

ತಪಾಸಣೆ ವೇಳೆ ವಾಣಿಜ್ಯ ಬಳಕೆಗೆ ಮೀಸಲಾದ ಕಮರ್ಷಿಯಲ್ ಸಿಲಿಂಡರ್‌ಗಳ ಬದಲಿಗೆ ಸರ್ಕಾರದ ಸಹಾಯಧನದ ಗೃಹಬಳಕೆಯ ಡೊಮೆಸ್ಟಿಕ್ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಸಂಬಂಧಿತ ಹೋಟೆಲ್ ಮತ್ತು ಡಾಬಾ ಮಾಲೀಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ನಂತರ ಮಾತನಾಡಿದ ತಹಸೀಲ್ದಾರ ಭೀಮರಾಯ ರಾಮಸಮುದ್ರ ಅವರು, ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್‌ಗಳನ್ನು ಕೇವಲ ಮನೆ ಬಳಕೆಗೆ ಮಾತ್ರ ನೀಡಲಾಗಿದ್ದು, ಹೋಟೆಲ್, ಡಾಬಾ, ಬೇಕರಿ, ಕ್ಯಾಂಟೀನ್ ಸೇರಿದಂತೆ ಯಾವುದೇ ವಾಣಿಜ್ಯ ಚಟುವಟಿಕೆಗೆ ಬಳಸುವುದು ಕಾನೂನುಬಾಹಿರ ಎಂದು ಎಚ್ಚರಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು. ಶ್ರೀನಿಧಿ ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಅವರು, ಹೋಟೆಲ್ ಹಾಗೂ ಡಾಬಾಗಳಿಗೆ ಡೊಮೆಸ್ಟಿಕ್ ಸಿಲಿಂಡರ್ ಸರಬರಾಜು ಮಾಡಿರುವುದು ಪತ್ತೆಯಾದರೆ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಿಂದೂ ಸಮಾಜೋತ್ಸವ: ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಡಿಸಿ ಆದೇಶ

ಈ ದಾಳಿಯಲ್ಲಿ ಕಂದಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...