ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕ ಸೂಚನೆ

Date:

ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಿಳಿಸಿದರು.

- Advertisement -

ನಗರದ ಸಂಸದರ ಕಾರ್ಯಾಲಯದಲ್ಲಿ ಶನಿವಾರ ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ‘ಕಾಮಗಾರಿ ಪ್ರಾರಂಭವಾಗಿ ಹಲವು ವರ್ಷಗಳು ಕಳೆದಿದ್ದರೂ ಇನ್ನೂ ಪೂರ್ಣಗೊಳ್ಳದಿರುವುದಿರುವುದು ಸರಿಯಲ್ಲ’ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

‘ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಸ್ಥಳೀಯರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯವಿರುವ ಕಡೆಗಳಲ್ಲಿ ಸರ್ವಿಸ್ ರಸ್ತೆ, ಅಂಡರ್‌ಪಾಸ್ ಹಾಗೂ ಸುರಕ್ಷಿತ ಸಂಪರ್ಕ ಮಾರ್ಗಗಳನ್ನು ಕಲ್ಪಿಸಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ರೈತರು ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು. ಹೆದ್ದಾರಿ ಕಾಮಗಾರಿಗಳಿಂದಾಗಿ ಗ್ರಾಮೀಣ ಪ್ರದೇಶಗಳ ಸಂಪರ್ಕ ಕಡಿತಗೊಳ್ಳದಂತೆ ಸ್ಥಳೀಯ ಅಗತ್ಯತೆಗಳನ್ನು ಪರಿಗಣಿಸಬೇಕು. ಶಾಲೆಗಳು, ಗ್ರಾಮಗಳು, ಕೃಷಿ ಜಮೀನುಗಳು ಹಾಗೂ ಪ್ರಮುಖ ಸಂಪರ್ಕ ಸ್ಥಳಗಳ ಬಳಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಿರುವ ಅಂಡರ್‌ಪಾಸ್ ಮತ್ತು ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು’ ಎಂದರು.

‘ಕಾಮಗಾರಿಗಳಲ್ಲಿ ಎದುರಾಗಿರುವ ತಾಂತ್ರಿಕ ಹಾಗೂ ಭೂಸ್ವಾಧೀನ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಅವುಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪರಿಹರಿಸಬೇಕು. ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ವಿಳಂಬವಾಗದಂತೆ ಕಾರ್ಯಯೋಜನೆ ರೂಪಿಸಬೇಕು’ ಎಂದು ಸಂಸದರು ಸೂಚಿಸಿದರು.

ಭಾರತಮಾಲಾ ಯೋಜನೆಯ ಪ್ಯಾಕೇಜ್-3 ಮತ್ತು 4 ಹಾಗೂ ಹುನುಗುಂದ-ರಾಯಚೂರು ಚತುಷ್ಪಥ ಹೆದ್ದಾರಿ ಪ್ಯಾಕೇಜ್-5 ಮತ್ತು 6 ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಕಲಚೇತನರ ಪಿಂಚಣಿ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಸಚಿವ ಅಜಯ ಧರಂಸಿಂಗ್‌ಗೆ ಮನವಿ

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ, ಮುಖ್ಯ ಎಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗೃಹರಕ್ಷಕ ದಳದಲ್ಲಿ 54 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಗೃಹರಕ್ಷಕ ದಳದ ತಾಲೂಕು ಹಾಗೂ ಉಪ ಘಟಕಗಳಲ್ಲಿ ವಿವಿಧ...

ನಿಟ್ಟೆ ವಿವಿಯ 16ನೇ ಘಟಿಕೋತ್ಸವದ 2ನೇ ಅಧಿವೇಶನ: 1,148 ವಿದ್ಯಾರ್ಥಿಗಳಿಗೆ ಬಿಟೆಕ್ ಪದವಿ ಪ್ರದಾನ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನವು ಶನಿವಾರ ನಿಟ್ಟೆ...

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...