ರಾಯಚೂರು | ಹಟ್ಟಿ ಚಿನ್ನದ ಗಣಿಗೆ ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಸಂಪರ್ಕಕ್ಕೆ ಸಂಸದರ ಮನವಿ

Date:

ಹಟ್ಟಿ ಚಿನ್ನದ ಗಣಿಗೆ ಬೀದರ್–ಶ್ರೀರಂಗಪಟ್ಟಣ (150ಎ) ಹಾಗೂ ಬೆಳಗಾವಿ–ರಾಯಚೂರು (748ಎ) ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಹಾಗೂ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವಂತೆ ಹಟ್ಟಿ ಪಟ್ಟಣ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಸುರೇಶಗೌಡ ಗುರಿಕಾರ, ಲಾಲ್‌ಪೀರ್ ಸೇರಿದಂತೆ ಹಟ್ಟಿ ನಿವಾಸಿಗಳು ಕಳೆದ ಜುಲೈನಲ್ಲಿ ಜಿ ಕುಮಾರ್ ಸಂಸದರಿಗೆ ಮನವಿ ಸಲ್ಲಿಸಿದ್ದರು.

- Advertisement -

ಈ ಮನವಿಗೆ ಸ್ಪಂದಿಸಿದ ರಾಯಚೂರು ಸಂಸದ ಜಿ. ಕುಮಾರ ನಾಯಕ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ. ಉಮಾಶಂಕರ ಅವರಿಗೆ ಮನವಿ ಮಾಡಿದ್ದಾರೆ. ಆ.9ರಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ವಿ. ಉಮಾಶಂಕರ ಅವರನ್ನು ಭೇಟಿಯಾಗಿ ಹಟ್ಟಿ ಚಿನ್ನದ ಗಣಿಗೆ ಅಗತ್ಯವಿರುವ ರಸ್ತೆ ಸಂಪರ್ಕದ ಕುರಿತು ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ರಾಯಚೂರು ಜಿಲ್ಲೆಯ ಪ್ರಮುಖ ಕೈಗಾರಿಕಾ ಸಂಸ್ಥೆಯಾಗಿರುವ ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನದ ಉತ್ಪಾದನೆ ನಡೆಯುತ್ತಿದ್ದು, ಚಿನ್ನದ ಅದಿರು ಹಾಗೂ ಇತರೆ ಸಾಮಗ್ರಿಗಳ ಸಾಗಣೆಗೆ ಉತ್ತಮ ರಸ್ತೆ ಸಂಪರ್ಕದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 150ಎ ಹಾಗೂ 748ಎ ರಾಷ್ಟ್ರೀಯ ಹೆದ್ದಾರಿಗಳಿಂದ ಹಟ್ಟಿಗೆ ನೇರ ಸಂಪರ್ಕ ಕಲ್ಪಿಸುವ ಹೊಸ ರಸ್ತೆ ನಿರ್ಮಾಣದ ಸಾಧ್ಯತೆ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ಅಧ್ಯಯನ ಕೈಗೊಳ್ಳಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೂಮಾನಂದ ಕೊಲೆ ಸಮಗ್ರ ತನಿಖೆಗೆ ಆಗ್ರಹ: ಆ.23ರಂದು ಹದ್ದಿನಾಳದಿಂದ ಬೈಕ್ ರ‍್ಯಾಲಿ

ರಸ್ತೆ ನಿರ್ಮಾಣ ಕಾರ್ಯ ಸಾಧ್ಯವೆಂದು ಕಂಡುಬಂದಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ, ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿ. ಕುಮಾರ ನಾಯಕ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...