ರಾಯಚೂರು | ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

Date:

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಯಚೂರು ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧಿಸಿ ರಾಯಚೂರು ಜಿಲ್ಲಾಧಿಕಾರಿ ಪುವಿತಾ ಎಸ್ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ರಾಯಚೂರು ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ದೇವದುರ್ಗ ಹಾಗೂ ಮಸ್ಕಿ ತಾಲೂಕಿನ ಒಟ್ಟು 29 ಗ್ರಾಮಗಳಲ್ಲಿ ಜೂ.17ರಿಂದ 26ರವರೆಗೆ ಸಾರ್ವಜನಿಕವಾಗಿ ಗುಂಪು ಗುಂಪಾಗಿ ಮೊಹರಂ ಆಚರಿಸುವುದು ಹಾಗೂ ಸಾರ್ವಜನಿಕ ಮೆರವಣಿಗೆ ನಡೆಸುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಿಂಧನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಿಣಿವಾರ, ಉಪ್ಪಳ, ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ನಿಡಿಗೋಳ-ತಿಡಿಗೋಳ, ಹತ್ತಿಗುಡ್ಡ, ಕುರಕುಂದಾ, ಚಿಕ್ಕಬೇರ್ಗಿ, ಬಳಗನೂರು ಪೊಲೀಸ್ ಠಾಣೆಯ ಉದ್ದಳ(ಯು) ರಾಗಲಪರ್ವಿ, ಮಾನವಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿಹಾಳ, ಜಾನೇಕಲ್, ಮದ್ದಾಪುರ, ಜಾಗೀರ್ ಪನ್ನೂರು, ಮಲ್ಲಿನ ಮಡಗು, ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರವಾರ ಪಟ್ಟಣ, ಕಡದಿನ್ನಿ, ಬೊಮ್ಮನಾಳ, ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕವಿತಾಳ ಪಟ್ಟಣ, ಹಿರೆಬಾದರದಿನ್ನಿ, ಬಾಗಲವಾಡ, ಅಮೀನಗಡ, ಗೂಗೆಬಾಳ, ಮಸ್ಕಿ ತಾಲೂಕಿನ ತಲಖೇನಾ, ಸಂತೇಕಲ್ಲೂರು, ಮುಸಲಿ ಕಾರಲಕುಂಟೆ, ಜಾಲಹಳ್ಳಿಯ ಚಿಂಚೋಡಿ ಗ್ರಾಮ ಹಾಗೂ ಗಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾನಾಪೂರ, ಬುದ್ದಿನ್ನಿ, ರಾಮದುರ್ಗ, ಹಿರೆಬೂದೂರು ಗ್ರಾಮಗಳಲ್ಲಿ ನಿಷೇಧ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯಂತೆ, ಈ ಹಿಂದೆ ಮೊಹರಂ ಆಚರಣೆ ವೇಳೆ ಕೆಲ ಗ್ರಾಮಗಳಲ್ಲಿ ಅಲಾಯಿ ಕುಣಿಯುವ ಸಂದರ್ಭದಲ್ಲಿ ಕಾಲ್ತುಳಿತ, ಯುವಕರ ನಡುವೆ ಬಡಿಗೆ ಮತ್ತು ಬೆತ್ತ ಹಿಡಿದು ಜಗಳ, ಹಲ್ಲೆ ಸೇರಿದಂತೆ ಹಲವು ಘಟನೆಗಳು ನಡೆದಿದ್ದು, ಪ್ರಕರಣಗಳು ದಾಖಲಾಗಿದ್ದವು.

ಈ ವರ್ಷದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದು, ಹಿಂದಿನ ದ್ವೇಷದ ಹಿನ್ನೆಲೆಯಲ್ಲಿ ವಿವಿಧ ಸಮುದಾಯಗಳ ಯುವಕರ ನಡುವೆ ಮತ್ತೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೋಳ ಖರೀದಿ ಹಣ ಪಾವತಿಗೆ ಆಗ್ರಹಿಸಿ ರಸ್ತೆ ತಡೆದು ರೈತರು ಪ್ರತಿಭಟನೆ

ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆಯ್ದ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಮೊಹರಂ ಆಚರಿಸುವುದು ಹಾಗೂ ಮೆರವಣಿಗೆ ನಡೆಸುವುದನ್ನು ನಿಷೇಧಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಶಿಫಾರಸು ಮಾಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...