ರಾಯಚೂರು | ಕೊಲೆ ಪ್ರಕರಣ; 10 ಮಂದಿಗೆ ಜೀವಾವಧಿ ಶಿಕ್ಷೆ

Date:

ಜಿಲ್ಲೆಯ ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಒಟ್ಟು 10 ಮಂದಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ₹19,500 ದಂಡವನ್ನು ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ‌ಆದೇಶಿಸಿದೆ.

ಜಗದೀಶ, ಯಮನೂರ, ಮಹಾಂಕಾಳಪ್ಪ, ಬಸವರಾಜ ದೊಡ್ಡಮನಿ, ಹನುಮಂತಿ, ದುರುಗಪ್ಪ, ಶರಣಬಸವ, ಕೆಂಚಮ್ಮ, ಯಲ್ಲಪ್ಪ, ಯಲ್ಲಮ್ಮ ಹಾಗೂ ನಿಂಗಪ್ಪ ದೊಡ್ಡಮನಿ ಎಂಬುವರು ದೋಷಿಗಳೆಂದು ಶಿಕ್ಷೆ ವಿಧಿಸಲಾಗಿದೆ.

ಪ್ರಕರಣ; ಗ್ರಾಮಪಂಚಾಯತ್ ವಿಚಾರವಾಗಿ ಉಂಟಾದ ಹಳೆಯ ದ್ವೇಷದ ಹಿನ್ನೆಲೆಯಲ್ಲಿ 10-02-2021 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ಹನುಮಂತಮ್ಮ ಹಾಗೂ ಅವರ ಮಕ್ಕಳಾದ ಶರಣಬಸವ ಮತ್ತು ಅಮರೇಶರ ಮೇಲೆ ಆರೋಪಿತರು ಗುಂಪು ರಚಿಸಿಕೊಂಡು ಹಲ್ಲೆ ನಡೆಸಿದ್ದರು.

ಆರೋಪಿತರು ಕಟ್ಟಿಗೆ, ಕೊಡಲಿ, ಕಲ್ಲು ಮುಂತಾದವುಗಳನ್ನು ಬಳಸಿಕೊಂಡು ದಾಳಿ ನಡೆಸಿ ಶರಣಬಸವ ಅವರನ್ನು ಗಂಭೀರವಾಗಿ ಗಾಯಗೊಳಿಸಿದ್ದರು. ಗಾಯಾಳುವನ್ನು ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶರಣಬಸವ ಮೃತಪಟ್ಟಿದ್ದರು.
ಈ ಸಂಬಂಧ ಹನುಮಂತು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ರಾಯಚೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಆರೋಪಿತರನ್ನು ದೋಷಿಗಳೆಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಖರ್ಗೆ ಕುರಿತು ಅಸಂಬದ್ಧ ಟೀಕೆ; ಹೀಮಂತ ಬಿಸ್ವಾಶರ್ಮಾ, ಆರ್ ಎಸ್ಎಸ್ ವಿರುದ್ಧ ವಸಂತಕುಮಾರ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಕರಣದ ತನಿಖೆಯನ್ನು ಅಂದಿನ ಸಿಪಿಐಗಳಾದ ಮಹಾಂತೇಶ ಸಜ್ಜನ ಹಾಗೂ ರಮೇಶ್ ಕುಲ್ಕರ್ಣಿ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಂಜುನಾಥ ಬೇರ್ಗಿ (ಹುಳ್ಳಿಹಾಳ್) ವಾದ ಮಂಡಿಸಿದರು. ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ನಿಂಗಯ್ಯ ಹಾಗೂ ಮಂಜುನಾಥ ಪೊಲೀಸ್ ಸಿಬ್ಬಂದಿ ಸಹಕಾರ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...