ತಾಲ್ಲೂಕಿನ ಹಂಚಿನಾಳ ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ₹10 ವಿಚಾರವಾಗಿ ನಡೆದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಪನೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ರವಿ, ವೀರೇಶ, ನರಸಿಂಹ, ಮಾರೆಪ್ಪ, ರಮೇಶ ಮತ್ತು ಪ್ರವೀಣ್ ಅವರನ್ನು ಬಂಧಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನೆಟ್ವರ್ಕ್ ಸಮಸ್ಯೆ: ಬೆಟ್ಟದ ಮೇಲೆ ಕುಳಿತು ಎಸ್ಐಆರ್ ಮಾಹಿತಿ ಅಪ್‌ಲೋಡ್
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.




