ರಾಯಚೂರು | ದಲಿತ ಯುವಕ, ಯುವತಿ ಕೊಲೆ: ಆರೋಪಿಗಳಿಗೆ ಮರಣದಂಡನೆ ವಿಧಿಸಲು ಆಗ್ರಹ

Date:

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಸಮಿತಿ ವತಿಯಿಂದ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

- Advertisement -

ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ದಲಿತ ಯುವಕ ಭೂಮನಂದನನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಹಾಗೂ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ದಲಿತ ಯುವತಿ ಅಶ್ವಿನಿ ಬಯಲು ಶೌಚಕ್ಕೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಎರಡೂ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಯಾವುದೇ ವಿಳಂಬವಿಲ್ಲದೆ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದರೂ, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಮುಖಂಡರು ಆರೋಪಿಸಿದರು.

ಆರೋಪಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿದ್ದು, ಇದರಿಂದ ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ನಂಬಿಕೆ ಕುಸಿಯುತ್ತಿದೆ. ಕೊಲೆಯಾದವರ ಕುಟುಂಬಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಆದ್ದರಿಂದ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಸಮಿತಿ ವತಿಯಿಂದ ಆಗ್ರಹ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: 6 ಅಡುಗೆ ಸಹಾಯಕಿಯರ ವಜಾ

ಈ ವೇಳೆ ರಾಜ್ಯ ಉಪಾಧ್ಯಕ್ಷರು ಕೆಈ. ಕುಮಾರ್, ರಾಜ್ಯಾಧ್ಯಕ್ಷರು ಎನ್ ವೆಂಕಟೇಶ್, ಶಂಕರ್ ನಂದಿಹಾಳ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...