ರಾಯಚೂರು | ಜಮೀರ್ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಕಮಿಟಿ ಒತ್ತಾಯ

Date:

ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ಆಗ್ರಹಿಸಿ ರಾಯಚೂರು ಜಿಲ್ಲಾ ಮುಸ್ಲಿಂ ಕಮಿಟಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಶೇ.95ರಷ್ಟು ಬೆಂಬಲ ನೀಡಿದ್ದು, ಕಾಂಗ್ರೆಸ್ ಸರ್ಕಾರ ರಚನೆಗೆ ಮಹತ್ವದ ಪಾತ್ರ ವಹಿಸಿದೆ. ಸರ್ಕಾರ ರಚನೆಯಾದ ಬಳಿಕ ಮುಸ್ಲಿಂ ಸಮುದಾಯಕ್ಕೆ ದೊರಯಬೇಕಾದ ರಾಜಕೀಯ ಸ್ಥಾನಮಾನಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಇತರ ಸಮುದಾಯದವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ತಾರತಮ್ಯ ತೋರಲಾಗುತ್ತಿದೆ ಎಂದು ದೂರಿದರು. ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಕೆಲವು ವ್ಯಕ್ತಿಗಳು ರಾಜಕೀಯ ಷಡ್ಯಂತ್ರದಿಂದ ಕೃತಕ ಬುದ್ಧಿಮತ್ತೆ (ಎಐ)ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ಆಡಿಯೋ ಸಂಭಾಷಣೆಯನ್ನು ಆಧಾರವನ್ನಾಗಿ ಮಾಡಿಕೊಂಡು ಆರೋಪಗಳನ್ನು ಹೊರಿಸಿ ಸಚಿವ ಸಂಪುಟದಿಂದ ಹೊರಗಿಟ್ಟಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ, ಸಮಾಜ ಹಾಗೂ ರಾಜ್ಯದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಮತ್ತು ಕೇಂದ್ರದ ಕಾಂಗ್ರೆಸ್ ನಾಯಕರು ಮುಸ್ಲಿಂ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ನಷ್ಟ ಮತ್ತು ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕೈ ಬಿಡಲ್ಲ; ಅರ್ಜಿಯಲ್ಲಿ ಸಂಪೂರ್ಣ ಮಾಹಿತಿ ನೀಡಿ: ಡಿಸಿ

ಪ್ರತಿಭಟನೆಯಲ್ಲಿ ಮುಸ್ಲಿಂ ಸಮಾಜದ ಅಧ್ಯಕ್ಷ ಫರೀದ್ ಮೌಲಾನ್, ಮಹೇಂದ್ರ, ಫಾರೂಖ್ ಯರಗೇರಾ, ಚಾಂದ್ ಪಾಷಾ ನೆಲಹಾಳ, ಅನ್ವರ್ ಗೋನವಾರ, ಇಮ್ರಾನ್ ಬಡೆಸಾಬ್, ಹಖ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...