ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸರ್ವಿಸ್ ರಸ್ತೆ ಇಲ್ಲದೆ ರೈತರ ಜಮೀನಿಗೆ ತೆರಳಲು ಸಂಕಷ್ಟ

Date:

ರಾಷ್ಟ್ರೀಯ ಹೆದ್ದಾರಿ 748 ಎ ರಸ್ತೆ ನಿರ್ಮಾಣ ನಡೆಯುತ್ತಿದ್ದು ಮಸ್ಕಿ ತಾಲೂಕಿನ ಗೋನವಾರ, ಮುಸ್ಲಿಕಾರ್ಲಕುಂಟಿ, ಬಸಾಪುರ ಸೇರಿ ಐದು ಗ್ರಾಮಗಳ ರೈತರ ಜಮೀನುಗಳಿಗೆ ಹೋಗುವ ಸರ್ವಿಸ್ ರಸ್ತೆಯೇ ಇಲ್ಲದೇ ಹೋಗಿದೆ. ಹೆದ್ದಾರಿ ಪ್ರಾಧಿಕಾರವರು ರೈತರ ಜಮೀನಿಗೆ ಹೋಗುವ ಹಕ್ಕು ಕಸಿದುಕೊಳ್ಳುತ್ತಲಿದ್ದಾರೆ ಎಂದು 748ಎ ಹೆದ್ದಾರಿ ರಸ್ತೆ ಜಮೀನು ವಂಚಿತ ರೈತ ಹೋರಾಟ ಸಮಿತಿ ಸಂಚಾಲಕ ಶರಣಪ್ಪ ಉದ್ಭಾಳ ದೂರಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಗ್ರಾಮಗಳಲ್ಲಿ ಸಭೆ ನಡೆಸಿದಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಮೀನಿಗೆ ಹೋಗುವ ಸರ್ವಿಸ್ ರಸ್ತೆ ನಿರ್ಮಾಣ ಮಾಡುವದಾಗಿ ಭರವಸೆ ನೀಡಿದ್ದರು. ಈಗ ಭೂಮಿ ಸ್ವಾಧೀನವಾಗಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಸರ್ವಿಸ್ ರಸ್ತೆ ನಿರ್ಮಿಸುವ ಯೋಜನೆಯೇ ಇಲ್ಲ ಎಂದು ಉಡಾಫೆಯಾಗಿ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೈತರು ಕೃಷಿ ಚಟುವಟಿಕೆಗಳಿಗೆ ಟ್ರಾಕ್ಟರ್,ಕೃಷಿ ಯಂತ್ರೋಪಕರಣಗಳನ್ನು ಜಮೀನಿಗೆತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಜಮೀನಿಗೆ ತೆರಳಲು ಐದಾರು ಕಿಮಿ ಸುತ್ತಿ ಹೋಗುವ ಸ್ಥಿತಿ ಕೆಲವರಿಗೆ ಇದ್ದರೆ ಮತ್ತೆ ಕೆಲವರಿಗೆ ಜಮೀನಿಗೆ ಹೋಗಲು ಸಾಧ್ಯವೇಇಲ್ಲ ಅವೈಜ್ಞಾನಿಕ ಯೋಜನೆ ರೂಪಿಸಲಾಗಿದೆ ಎಂದರು.

ರೈತರಿಗೆ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುತ್ತಿದ್ದು ಕೂಡಲೇ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆ ನಿರ್ಮಿಸಲು ಮುಂದಾಗಬೇಕೆಂದರು ಕೆಲವಡೆ ಅಂಡರ್ ಪಾಸ್ ನಿರ್ಮಿಸಲಾಗಿದೆ.ಅಲ್ಲಿ ನಿರ್ಮಾಣ ವಾಹನಗಳೇ ಸಂಚರಿಸಲು ಆಗುತ್ತಿಲ್ಲ. ಕೃಷಿ ಬೆಳೆಯನ್ನು ಮಾರುಕಟ್ಟೆಗೆ ತರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಸಚಿವರು,ಶಾಸಕರುಗಳು ರೈತರಿಗೆ ಎದುರಾಗಿರುವ ಸಮಸ್ಯೆ ಪರಿಹರಿಸಲು ಕ್ರಮವಹಿಸಬೇಕು.

ಅನೇಕ ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದಾರೆ ಹೊರತು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಕೂಡಲೇ ಸಮಸ್ಯೆ ಪರಿಹರಿಸದೇ ಹೋದರೆ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರಿನ ಸಮಸ್ಯೆ; ಬಕೆಟ್ ಹಿಡಿದು ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ

ಪ್ರತಿಭಟನೆಯಲ್ಲಿ ಅಮರೇಗೌಡ ಗೋನವಾರ, ಶಂಕ್ರಣ್ನ ಸಾಹುಕಾರ, ಸಿದ್ದಾಮಪ್ಪ ಗೋನವಾರ, ದೇವರೆಡ್ಡಿ ಮೇಟಿ, ಲಿಂಗಣ್ಣ ತೆಕ್ಕಲಕೋಟೆ, ಈರಣ್ಣ ಗುಡಿಹಾಳ, ತಿಪ್ಪನಗೌಡ, ಸೂಗರೆಡ್ಡಿ, ಲಾಲಸಾಬ ಸೇರಿದಂತೆ ವಿವಿಧ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...