ರಾಯಚೂರು | ಖರ್ಗೆ ಕುರಿತು ಅಸಂಬದ್ಧ ಟೀಕೆ; ಹಿಮಂತ ಬಿಸ್ವಾಶರ್ಮಾ, ಆರ್ ಎಸ್ಎಸ್ ವಿರುದ್ಧ ವಸಂತಕುಮಾರ ವಾಗ್ದಾಳಿ

Date:

ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಗಳು ಕೆಲ ವ್ಯಕ್ತಿಗಳನ್ನು ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತೇಜೋವಧೆ ನಡೆಸುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಅವರು ಖರ್ಗೆಯವರ ಕುರಿತು ಹಗುರವಾಗಿ ಮಾತನಾಡಿರುವುದನ್ನು ತೀವ್ರವಾಗಿ ಆಕ್ಷೇಪಿಸಿದರು. ಖರ್ಗೆಯವರು ಅಪಾರ ರಾಜಕೀಯ ಅನುಭವ ಹೊಂದಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಪಾರದರ್ಶಕವಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ವ್ಯಕ್ತಿಯ ಕುರಿತು ಟೀಕೆ ಮಾಡುವ ಮೂಲಕ ತನಿಖೆಗಳಿಂದ ತಪ್ಪಿಸಿಕೊಳ್ಳಲು ಶರ್ಮಾ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹೀಮಂತ ಬಿಸ್ವಾ ಶರ್ಮಾ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದು, ಅವರು ತನಿಖೆ ಎದುರಿಸಿರುವುದು ತಿಳಿದ ಸಂಗತಿ. ಕಾಂಗ್ರೆಸ್ ಪಕ್ಷದಲ್ಲೇ ರಾಜಕೀಯ ಜೀವನ ಆರಂಭಿಸಿದ ಅವರು ಬಳಿಕ ಬಿಜೆಪಿ ಸೇರಿ ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಖರ್ಗೆಯವರು ಆರ್‌ಎಸ್‌ಎಸ್ ಕುರಿತು ನೀಡಿದ ಹೇಳಿಕೆ ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸುವ ಪ್ರವೃತ್ತಿಗೆ ವಿರೋಧ ವ್ಯಕ್ತಪಡಿಸುವ ಸಂದರ್ಭದಲ್ಲಿಯೇ ಆ ಹೇಳಿಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್ ಸಂಘಟನೆಗೆ ಇತಿಹಾಸದಲ್ಲಿ ಎರಡು ಬಾರಿ ನಿಷೇಧ ಹೇರಲಾಗಿದ್ದು, ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ ನಂತರವೇ ಅದನ್ನು ತೆರವುಗೊಳಿಸಲಾಗಿದೆ ಎಂದರು. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಆರ್‌ಎಸ್‌ಎಸ್ ಸಂಘಟನೆಯನ್ನು ನಿಷೇಧಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಬಾಗಲಕೋಟೆಯಲ್ಲಿ ಆರ್.ಬಿ. ತಿಮ್ಮಾಪುರ, ಸಚಿವ ಸತೀಶ ಜಾರಕಿಹೊಳೆ, ಲಕ್ಷ್ಮಣ ಸವದಿ ಸೇರಿದಂತೆ ಹಲವು ನಾಯಕರು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ಗೊಂದಲವನ್ನು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿ ನಿವಾರಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಗುವಳಿದಾರರಿಗೆ ಭೂಮಿ ವಸತಿ ಒದಗಿಸಿ; ಇಲ್ಲದಿದ್ದರೆ ಮೇ 1ರಿಂದ ಅನಿರ್ದಿಷ್ಟಾವಧಿ ಹೋರಾಟ; ಮಾರೆಪ್ಪ ಹರವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ಗ ಇಟಗಿ, ದರೂರು ಬಸವರಾಜ, ಅಬ್ದುಲ್ ಕರೀಂ, ಎಂ.ಕೆ.ಬಾಬರ, ಕೆ.ಅಸ್ಲಂಪಾಷಾ, ತಲೆಕಾಯಿ ಮಾರೆಪ್ಪ, ಶ್ರೀನಿವಾಸ ಸಿಂಧೆ, ಡಿ.ಕೆ.ಮುರುಳಿ ಯಾದವ, ರಾಮಕೃಷ್ಣ, ಮಾರೆಪ್ಪ, ಉಸ್ಮಾನ, ಜೆ.ತಿಮ್ಮಪ್ಪ ಸೇರಿ ಅನೇಕರಿದ್ದರು.




WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...