ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಐದು ವರ್ಷ ಪೂರ್ಣಗೊಂಡಿರುವ 9,50,029 ಫಲಾನುಭವಿಗಳ ಪೈಕಿ 7,86,143 ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನೂ 1,63,886 ಫಲಾನುಭವಿಗಳ ಇ-ಕೆವೈಸಿ ಬಾಕಿ ಉಳಿದಿದ್ದು, ನಿಗದಿತ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ.
ಬಾಕಿ ಇರುವ ಫಲಾನುಭವಿಗಳು ತಮಗೆ ಜೋಡಣೆಯಾಗಿರುವ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಅಲ್ಲದೆ, ಅನ್ನ ಸೇವೆ’ ಮೊಬೈಲ್ ಆ್ಯಪ್ ಮೂಲಕವೂ ಇ-ಕೆವೈಸಿ ಮಾಡಿ ಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಶುಲ್ಕ ಪಾವತಿಸುವ ಅಗತ್ಯವಿಲ್ಲ. ಬಾಕಿ ಇರುವ ಫಲಾನು ಭವಿಗಳು ನ.30ರೊಳಗೆ ಪೂರ್ಣಗೊಳಿಸಬೇಕು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!
ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಿಂದ ಅಂತಹ ಫಲಾನುಭವಿಗಳ ಹೆಸರು ತೆಗೆದು ಹಾಕಲು ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




