ರಾಯಚೂರು | ರೈತರಿಗೆ ಉದ್ಯೋಗ ಒದಗಿಸಲು ನರೇಗಾ ಕಾಮಗಾರಿಗಳನ್ನು ಹೆಚ್ಚಿಸಲಾಗುವುದು: ಅಜಯ್ ಧರಂಸಿಂಗ್

Date:

ರೈತರ ಗುಳೆ ತಡೆಯಲು ಹಾಗೂ ಉದ್ಯೋಗ ಒದಗಿಸಲು ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ)ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸಗಳನ್ನು ತಕ್ಷಣವೇ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು ಹೇಳಿದರು.

- Advertisement -

ಜಿಲ್ಲೆಯ ದೇವದುರ್ಗ ಹೊರವಲಯದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರೈತರ ಮತ್ತು ಬಡವರ ಸಂಕಷ್ಟಕ್ಕೆ ಸ್ಪಂದಿಸುವುದು ರಾಜ್ಯ ಸರ್ಕಾರದ ಮುಖ್ಯ ಧ್ಯೇಯ. 2023 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ರಾಜ್ಯದ 211 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ರೈತರ ನೆರವಿಗೆ ಬಂದಿತ್ತು. ಪ್ರಸ್ತುತವೂ ಸರ್ಕಾರವು ರೈತರ ಬೆನ್ನಿಗೆ ನಿಲ್ಲಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ರಾಯಚೂರು ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 5 ರಿಂದ 5.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತಿತ್ತು. ಆದರೆ ಈ ಬಾರಿ ಮಳೆ ಅಭಾವದಿಂದಾಗಿ ಕೇವಲ 2,73,000 ಹೆಕ್ಟೇರ್ (ಶೇ.50 ರಷ್ಟು) ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 1,70,000 ಹೆಕ್ಟೇರ್ ಹತ್ತಿ ಹಾಗೂ 70,000 ಹೆಕ್ಟೇರ್ ತೊಗರಿ ಬಿತ್ತನೆಯಾಗಿದ್ದು, ಮಳೆಯಿಲ್ಲದೆ ರೈತರು 2-3 ಬಾರಿ ಬಿತ್ತನೆ ಮಾಡಿ ತೀವ್ರ ನಷ್ಟ ಎದುರಿಸುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಬಳಿ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಹಾಗೂ ಬರ ಪರಿಹಾರ ನೀಡುವಂತೆ ಈಗಾಗಲೇ ಮನವಿ ಮಾಡಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳ ಬರ ಪರಿಶೀಲನೆ ಪೂರ್ಣಗೊಂಡ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಕುಡಿಯುವ ನೀರು, ಬೆಳೆ ಪರಿಹಾರ, ಬೆಳೆ ವಿಮೆ ಹಾಗೂ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ಐಸಿಸಿ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಇದೇ ಸಂದರ್ಭದಲ್ಲಿ ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರಿಯಮ್ಮ ಜಿ.ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ, ದೇವದುರ್ಗ ತಹಶಿಲ್ದಾರ್ ನಾಗಮ್ಮ ಕಟ್ಟಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ...

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ...