ರಾಯಚೂರು | ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

Date:

ಮೊಹರಂ ಹಬ್ಬದ ಭದ್ರತಾ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕಿನಲ್ಲಿ ನಡೆದಿದೆ.

- Advertisement -

ಮೃತ ದುರ್ದೈವಿ ರೇಣುಕಾರಾಜ. ಲಿಂಗಸೂಗುರು ತಾಲ್ಲೂಕು ಆಮದಿಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ. ದೇವದುರ್ಗ ಡಿಎಆರ್ ಘಟಕದಲ್ಲಿ ಸಿಪಿಐ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೊಹರಂ ಹಬ್ಬದ ಹಿನ್ನೆಲೆ ಗಲಗ ವ್ಯಾಪ್ತಿಯ ಮದರಕಲ್ ಗ್ರಾಮಕ್ಕೆ ಭದ್ರತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದ ವೇಳೆ ಜೀಪ್ ಚಾಲನೆ ಮಾಡುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಖಾಸಗಿ ವಾಹನದಲ್ಲಿ ದೇವದುರ್ಗ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾರಾಜ ಅವರು 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆಗೆ ಸೇರ್ಪಡೆಯಾಗಿದ್ದರು. ಪ್ರಸ್ತುತ ದೇವದುರ್ಗ ಡಿಎಆರ್ ಘಟಕದಲ್ಲಿ ಸಿಪಿಐ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್ ಸಂಪರ್ಕ ಕಡಿತಕ್ಕೆ ಆಕ್ರೋಶ: ಜೆಸ್ಕಾಂ ಕಚೇರಿಗೆ ಬೆಂಕಿ ಹಚ್ಚಿದ ಗ್ರಾಹಕ

ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಅವರ ನಿಧನ ಸಂಭವಿಸಿರುವುದು ಪೊಲೀಸ್ ಇಲಾಖೆಯಲ್ಲಿ ಶೋಕದ ಛಾಯೆ ಮೂಡಿಸಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಸಿಬ್ಬಂದಿ, ಬಂಧು-ಬಳಗ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ ಹಲವರು ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...