ರಾಯಚೂರು | ಶುದ್ಧ ನೀರಿನ ಘಟಕಗಳ ಕಾರ್ಯಾಚರಣೆ ಸ್ಥಗಿತ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಗಲಗ ಗ್ರಾಮದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ, ಒಂದೂ ಕೂಡ ಕಾರ್ಯಾಚರಣೆಯಲ್ಲಿಲ್ಲ.

- Advertisement -

ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಬೇಸಿಗೆ ಕಾಲದಲ್ಲಿ ಸಮಸ್ಯೆ ಎದುರಾಗುತ್ತದೆ. ಬೇಸಿಗೆ ಕಾಲದಲ್ಲಿ ಕಾಲುವೆ ನೀರನ್ನು ಬಂದ್ ಮಾಡಲಾಗುತ್ತದೆ. ಹಾಗಾಗಿ ಅಕ್ಕಪಕ್ಕ ಬೋರ್‌ವೆಲ್ ಇದ್ದವರ ಮನೆಗೆ ಹೋಗಿ ನೀರು ತೆಗೆದುಕೊಂಡು ಬರುವ ಸ್ಥಿತಿಯಿದೆ. ಪ್ರಸ್ತುತವಾಗಿ ಮನೆಯ ಮುಂದೆ ಖಾಸಗಿ ನೀರಿನ ಗಾಡಿ ಬರುತ್ತದೆ. ಸ್ಥಳೀಯರು ಅದನ್ನು ತುಂಬಿಕೊಂಡು ಬಳಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಅಡ್ಡಂಡ ಕಾರ್ಯಪ್ಪನವರ ನಾಟಕದ ವಿವಾದ: ಗೋಡ್ಸೆ ವೈಭವೀಕರಣದ ಹಿಂದೆ...

ಗೋಡ್ಸೆಯನ್ನು ವೈಭವೀಕರಿಸುವ ರಾಜಕೀಯವನ್ನು ಕೇವಲ ಒಬ್ಬ ವ್ಯಕ್ತಿಯ ಅಭಿಮಾನ ಅಥವಾ ಇತಿಹಾಸದ ಪರ್ಯಾಯ ಓದು ಎಂದು ಸೀಮಿತಗೊಳಿಸಲಾಗದು. ಅದರ ಮೂಲಕ ಗಾಂಧೀಜಿಯವರನ್ನು ಸಾರ್ವಜನಿಕ ಸ್ಮೃತಿಯಿಂದ ದೂರಮಾಡಿ, ಅವರ ಹತ್ಯೆಯನ್ನು ಸಮರ್ಥಿಸಬಹುದಾದ ವಾತಾವರಣ ನಿರ್ಮಿಸುವ...

ಗ್ರಾಮದಲ್ಲಿ ನಾಲ್ಕು ಶುದ್ದ ನೀರಿನ ಘಟಕ 2010 ಹಾಗೂ 2012ರಲ್ಲಿ ಉದ್ಘಾಟನೆ ಮಾಡಲಾಗಿತ್ತು. ಕೆಲವು ವರ್ಷಗಳವರಗೆ ಕಾರ್ಯಾಚರಣೆಯಲ್ಲಿತ್ತು. ಬಳಿಕ ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ಹದಗೆಟ್ಟಿವೆ. ಸುಮಾರು ನಾಲ್ಕು ವರ್ಷಗಳು ಕಳೆದರೂ ಕೂಡ ಒಂದೂ ಚಾಲ್ತಿಯಲ್ಲಿಲ್ಲದಿರುವುದು ಕಂಡುಬಂದಿದೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ತಾಲೂಕಿನ ಕೆಲವು ಭಾಗಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಸಾವನ್ನಪ್ಪಿರುವುದು ದುರಂತವೇ ಸರಿ.

ಸ್ಥಳೀಯ ನಿವಾಸಿ ಶಿವನಗೌಡ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದಲ್ಲಿ 4 ಶುದ್ಧ ಕುಡಿಯುವ ನೀರಿನ ಘಟಕಗಳು ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಹಾಳುಬಿದ್ದಿವೆ” ಎಂದು ತಿಳಿಸಿದರು.

“ಪಂಚಾಯತ್ ಅಧಿಕಾರಿಗಳನ್ನು ಕೇಳಿದರೆ, ಇದು ನಮ್ಮ ಪಂಚಾಯತ್ ಅಧೀನಕ್ಕೆ ಬರುವುದಿಲ್ಲವೆಂದು ಹೇಳುತ್ತಾರೆ. ಈ ಸಮಸ್ಯೆ ಬಗ್ಗೆ ನಾವು ಯಾರಿಗೆ ತಿಳಿಸಬೇಕು, ಸಂಬಂಧಪಟ್ಟವರು ಯಾರು ಎಂಬುದೂ ನಮಗೆ ತಿಳಿದಿಲ್ಲ. ಗ್ರಾಮದ ಒಂದು ನೀರಿನ ಘಟಕ ಶಾಲೆಯ ಆವರಣದಲ್ಲಿ ಇರುವುದರಿಂದ ಅದನ್ನು ಊರಿನ ಜನರೇ ಬಂದ್ ಮಾಡಿದ್ದಾರೆ. ಶಾಲೆಯ ಮಕ್ಕಳು ಹೋಗುವಾಗ, ಬರುವಾಗ ಕಾಲು ಜಾರಿ ಬೀಳುತ್ತವೆಂಬ ಕಾರಣಕ್ಕೆ ಆವರಣದಲ್ಲಿರುವ ನೀರಿನ ಘಟಕವನ್ನು ಬಂದ್‌ ಮಾಡಲಾಗಿದೆ. ಇನ್ನೂ ಮೂರು ನೀರಿನ ಘಟಕಗಳನ್ನು ಆದಷ್ಟು ಬೇಗ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮದ ಜನರು ಸೇರಿ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿದ್ದೀರಾ? ಜಗಳೂರು ಸಂತೆಯಲ್ಲಿ ಬೀಡಾಡಿ ದನಗಳದೇ ವ್ಯಾಪಾರ, ಜನರ ಗೋಳು ಕೇಳುವವರಿಲ್ಲ

ಗಲಗ ಗ್ರಾಮ ಪಂಚಾಯತ್ ಪಿಡಿಒ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಘಟಕಗಳ ಟೆಂಡರ್ ವರ್ಕ್ ಮಾಡುವರು ಅದನ್ನು ಸರಿಯಾಗಿ ನಿರ್ವಹಿಸಬೇಕು. ಆದರೆ, ಅವರು ಬೇಕಾಬಿಟ್ಟಿ ಮಾಡಿ ಹೋಗಿದ್ದಾರೆ. ಎಲ್ಲವೂ ಹಾಳಾಗಿವೆ. ದೇವದುರ್ಗ ತಾಲೂಕಿನಲ್ಲಿ 120 ನೀರಿನ ಘಟಕಗಳು ಇವೆ. ಇದರ ಸಂಬಂಧ ಮೇಲಧಿಕಾರಿಗಳು ಸಭೆ ಕರೆದಿದ್ದಾರೆ. ಟೆಂಡರ್ ಮಾಲೀಕರ ಮೇಲೆ ಇದರ ಬಗ್ಗೆ ಚರ್ಚಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಮೊಹಮದ್ ರಫಿ
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ...

ರಾಯಚೂರು | ಅಗ್ರಿಗೋಲ್ಡ್ ಹೂಡಿಕೆದಾರರ ಬಾಂಡ್‌, ರಸೀದಿ ಪರಿಶೀಲನೆಗೆ ಕೇಂದ್ರ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ...