ರಾಯಚೂರು | ವಿದ್ಯುತ್ ಸಂಪರ್ಕ ಕಡಿತಕ್ಕೆ ಆಕ್ರೋಶ: ಜೆಸ್ಕಾಂ ಕಚೇರಿಗೆ ಬೆಂಕಿ ಹಚ್ಚಿದ ಗ್ರಾಹಕ

Date:

ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡ ಗ್ರಾಹಕರೊಬ್ಬರು ಜೆಸ್ಕಾಂ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಸಿರವಾರ ಉಪವಿಭಾಗದ ಮಲ್ಲಟ ಶಾಖೆಯಲ್ಲಿ ನಡೆದಿದೆ.

- Advertisement -

ತಾಲೂಕಿನ ಮಲ್ಲಟ ಶಾಖೆ ವ್ಯಾಪ್ತಿಯ ಹೊಸೂರು ಗ್ರಾಮದ ನಿವಾಸಿ ಶಿವಪ್ಪ ತಂದೆ ಬಸನಗೌಡ ಗಡಿಗೆ ಅವರ ಮನೆಗೆ ₹11,983 ವಿದ್ಯುತ್ ಬಿಲ್ ಬಾಕಿ ಉಳಿದಿದ್ದ ಹಿನ್ನೆಲೆಯಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿ ಅವರು ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಇದರಿಂದ ಆಕ್ರೋಶಗೊಂಡ ಶಿವಪ್ಪ ಅವರು ಮಲ್ಲಟ ಜೇಸ್ಕಾಂ ಶಾಖೆ ಕಚೇರಿಗೆ ಆಗಮಿಸಿ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಬಳಿಕ ತನ್ನ ದ್ವಿಚಕ್ರ ವಾಹನದಿಂದ ಪೆಟ್ರೋಲ್ ತೆಗೆದು ಕಚೇರಿಯ ಬಾಗಿಲು ಹಾಗೂ ಟೇಬಲ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಬೆಂಕಿಯಿಂದ ಕಚೇರಿಯಲ್ಲಿದ್ದ ಕಂಪ್ಯೂಟರ್ ಸೇರಿದಂತೆ ಕೆಲವು ವಸ್ತುಗಳು ಸುಟ್ಟು ಹಾನಿಗೊಳಗಾಗಿವೆ. ಘಟನೆಯಿಂದ ಕಚೇರಿಯ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ತಕ್ಷಣ ಬೆಂಕಿಯನ್ನು ನಂದಿಸಲಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ, ಮನೆ ನೀಡುವಂತೆ

ಘಟನೆಯ ಸಂಬಂಧ ಜೆಸ್ಕಾಂ ಸಿಬ್ಬಂದಿಗಳು ಸಿರವಾರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಲು ಮುಂದಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...