ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

Date:

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಹತ್ತಾರು ಮಂದಿ ರಾತ್ರಿ ವೇಳೆ ಅಂಗಡಿ ಮುಂದೆ ಕುಳಿತು ಕಾಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಅಂತಿಮ ಗಡುವಿನ ಆತಂಕದಿಂದ ಜನರು ರಾತ್ರಿಯಲ್ಲಿಯೇ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ರೈತ ಸಂಘದ ಮುಖಂಡ ಹಾಜಿ ಮಸ್ತಾನ್ ಮಾತನಾಡಿ, ಮಧ್ಯರಾತ್ರಿ ಸಮೀಪಿಸುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಪರದಾಡುವಂತಾಗಿದೆ. ಸುತ್ತಮುತ್ತಲಿನ ಸಣ್ಣಪುಟ್ಟ ಗ್ರಾಮಗಳಿಂದ ಬರುವ ಜನರು ಇ-ಕೆವೈಸಿಗಾಗಿ ಎರಡು-ಮೂರು ದಿನಗಳ ಕಾಲ ಕೆಲಸ ಬಿಟ್ಟು ಸಮಯ ಮೀಸಲಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಗೋಳು ಕಾಂಗ್ರೆಸ್ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರು, ಗರ್ಭಿಣಿಯರು ಹಾಗೂ ವೃದ್ಧರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ, ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಅವರು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...