ರಾಯಚೂರು | ಅಮಾನತುಗೊಂಡ ಅಧಿಕಾರಿಗಳ ಮರುನೇಮಕಕ್ಕೆ ಪಿಡಿಒಗಳ ಆಗ್ರಹ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳ ಅವೈಜ್ಞಾನಿಕ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಮದ್ಯಂತರ ವರದಿಯ ಆಧಾರದ ಮೇಲೆ ಅಮಾನತುಗೊಂಡ ಅಧಿಕಾರಿಗಳ ಆದೇಶ ಹಿಂಪಡೆಯಬೇಕು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಪಿಡಿಒಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

“ಸಾಮಾಜಿಕ ಲೆಕ್ಕ ಪರಿಶೋದನೆ ಅವೈಜ್ಞಾನಿಕವಾಗಿದೆ. ಇದನ್ನು ಕೂಡಲೇ ರದ್ದು ಮಾಡಬೇಕು.  ಗ್ರಾಮ ಪಂಚಾಯಿತಿಗಳ 24 ಮಂದಿ ಮನರೇಗಾ ಹೊರಗುತ್ತಿಗೆ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿರುವುದನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

“33 ಗ್ರಾಮ ಪಂಚಾಯಿತಿಗಳ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನೆಯ ಅಂತಿಮ ವರದಿ ಬರುವವರೆಗೆ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ಜರುಗಿಸಬಾರದು, ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಅಂತಿಮ ವರದಿ ಬಂದ ಬಳಿಕ ನಿಯಮಾನುಸಾರ ಅಡಾಕ್ ಸಮಿತಿಯಲ್ಲಿ ವರದಿಯ ಅಂಶಗಳನ್ನು ಸರಿಪಡಿಸಲು ಅವಕಾಶ ಮಾಡಿಕೊಡಬೇಕು” ಎಂಬುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರ ನಡೆಸಲು ಸಿದ್ಧರಾಮಯ್ಯ ಸರ್ಕಾರಕ್ಕೆ ದೇಣಿಗೆ ನೀಡುತ್ತೇವೆ; ರೈತ ಸಂಘ ಕಿಡಿ

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ತಿಮ್ಮಪ್ಪ ನಾಯಕ, ಕಿರಣ್ ಬಾಬು, ಶರಣ ಬಸವ, ಶಂಕರ, ಚನ್ನಬಸವ, ಮಹಮದ್ ಇಸಾಖ್, ದೀಪಕ್, ಅನ್ನಪೂರ್ಣ, ಸರಸ್ವತಿ, ಮಹೇಶ್ವರಿ, ನರಸಪ್ಪ, ಕರಿಯಪ್ಪ ಸೇರಿದಂತೆ ತಾಲೂಕಗಳ ಪಿಡಿಒಗಳು ಇದ್ದರು.

ವರದಿ : ಹಫೀಜುಲ್ಲ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್...

ತುಮಕೂರು | ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ ಏಳಕ್ಕೆ ಏರಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ...