ರಾಯಚೂರು | ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಠಿಚಾರ್ಜ್ ಪ್ರಜಾಪ್ರಭುತ್ವಕ್ಕೆ ಧಕ್ಕೆ: ರವಿ ಪಾಟೀಲ್

Date:

ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್‌ನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಬಲಪ್ರಯೋಗಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿಭಟಿಸುವುದು ಮತ್ತು ತಮ್ಮ ಧ್ವನಿಯನ್ನು ಎತ್ತುವುದು ಭಾರತದ ಸಂವಿಧಾನ ನೀಡಿರುವ ಮೂಲಭೂತ ಹಕ್ಕಾಗಿದೆ. ಲಾಠಿ, ಬಂಧನ ಹಾಗೂ ದಮನಕಾರಿ ಕ್ರಮಗಳ ಮೂಲಕ ನ್ಯಾಯದ ಧ್ವನಿಯನ್ನು ಹತ್ತಿಕ್ಕಲು ಯಾವುದೇ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿದ್ಯಾರ್ಥಿಗಳು, ಯುವಕರು ಹಾಗೂ ಸಾಮಾನ್ಯ ಜನರು ತಮ್ಮ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟವನ್ನು ಲಾಠಿಚಾರ್ಜ್, ಅಶ್ರುವಾಯು ಹಾಗೂ ಬಲಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಇಂತಹ ಕ್ರಮಗಳು ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ತರುತ್ತವೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ವಿರೋಧಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡನೀಯ. ಜನರ ಪರವಾಗಿ ಮಾತನಾಡುವ ನಾಯಕರನ್ನು ಬಂಧಿಸುವುದು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಕೇಂದ್ರ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ದಮನಕಾರಿ ಪ್ರವೃತ್ತಿಯನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು ಪರಿಸ್ಥಿತಿಯನ್ನು ಸಂವೇದನಾಶೀಲವಾಗಿ ನಿರ್ವಹಿಸಬೇಕು. ಇಲ್ಲವಾದರೆ ದೇಶಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆದ್ದಾರಿ ಕಾಮಗಾರಿಗೆ ಸರ್ವಿಸ್ ರಸ್ತೆಗೆ ರೈತರ ಆಗ್ರಹ: ಪೊಲೀಸ್ ಬಂದೋಬಸ್ತ್

ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿರುವ ರವಿ ಪಾಟೀಲ್, ಬಂಧನಕ್ಕೊಳಗಾಗಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ವಿಪಕ್ಷ ನಾಯಕರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಅಲ್ಲದೆ, ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...

ವಿಜಯಪುರ |ಯುವಜನತೆ ಚೆನ್ನಮ್ಮಳ ಧೈರ್ಯ, ದೇಶಪ್ರೇಮವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲಿ: ಡಾ. ಆನಂದ ಕೆ.

ಬ್ರಿಟಿಷರ ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರರಾಣಿ ಕಿತ್ತೂರು...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...