ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

Date:

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ ರಕ್ಷಕರು. ಅಪರಾಧ ತಡೆಗಟ್ಟಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವರ ಪರಿಶ್ರಮ ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದ ಬಳಿಯ ಹುತಾತ್ಮರ ಸ್ಮಾರಕದಲ್ಲಿ ಬುಧವಾರ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಮಾಡುವ ಪೊಲೀಸರು ದೇಶದ ಭದ್ರತೆ ಕಾಪಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ...

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ ಧರ್ಮಕ್ಕೆ ಸ್ಥಾನವಿಲ್ಲದಿದ್ದರೂ, ಮತಾಂತರವನ್ನು ಮೀಸಲಾತಿಯ ಅರ್ಹತೆಗೆ ಜೋಡಿಸಿರುವುದೇಕೆ? ಇಂದಿರಾ ಸಾಹ್ನಿ ತೀರ್ಪಿಗೆ ವಿರೋಧಾಭಾಸವಾಗಿದೆ ಸುಪ್ರೀಂ ಕೋರ್ಟ್‌ನ ಹೊಸ ತೀಪು! 1992ರಲ್ಲಿ ಸುಪ್ರೀಂ...

1959ರಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸಿಆರ್‌ಪಿಎಫ್ ಸಿಬ್ಬಂದಿಯ ಶೌರ್ಯ ಮತ್ತು ದೇಶಪ್ರೇಮ ಇಂದಿನ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದೆ. ದೇಶದ ಗಡಿರಕ್ಷಣೆಯಿಂದ ಹಿಡಿದು ಆಂತರಿಕ ಭದ್ರತೆಯವರೆಗೆ ಪೊಲೀಸ್ ಪಡೆಗಳು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.

ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿ ಇಸ್ಮಾಯಿಲ್ ಹಾಗೂ ರೇಣುಕಾ ಅವರ ಸೇವೆ ಮತ್ತು ಬಲಿದಾನವನ್ನೂ ಜಿಲ್ಲಾಧಿಕಾರಿ ಸ್ಮರಿಸಿದರು. ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಇಂತಹ ಸಿಬ್ಬಂದಿಯ ತ್ಯಾಗವು ಪೊಲೀಸ್ ಇಲಾಖೆಯ ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಲು ಗಿರಿ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ನಮನ ಸಲ್ಲಿಸಿ ಮಾತನಾಡಿ, ಪೊಲೀಸ್ ಹುತಾತ್ಮರ ದಿನಾಚರಣೆಯ ಐತಿಹಾಸಿಕ ಹಿನ್ನೆಲೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ, ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರು, ಗಣ್ಯರು ಉಪಸ್ಥಿತರಿದ್ದು, ವೀರಯೋಧರಿಗೆ ಗೌರವ ನಮನ ಸಲ್ಲಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...