ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

Date:

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಬಿ. ಜಕಾತಿ ಹೇಳಿದರು.

- Advertisement -

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ದೈಹಿಕ ಸಾಮರ್ಥ್ಯ ಉತ್ತಮವಾಗಿದ್ದಾಗ ಮಾತ್ರ ಯಾವುದೇ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹೀಗಾಗಿ ಒತ್ತಡದ ಕೆಲಸದ ನಡುವೆಯೂ ಆರೋಗ್ಯದ ಕಡೆಗೆ ಗಮನಹರಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.

ಸಾರ್ವಜನಿಕರು ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕಿದೆ. ನ್ಯಾಯಾಂಗ ಇಲಾಖೆಯ ಸಿಬ್ಬಂದಿಯೂ ಸಾರ್ವಜನಿಕರಿಗೆ ನ್ಯಾಯ ಒದಗಿಸುವ ಕಾರ್ಯದಲ್ಲಿ ನಿರಂತರ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ವ್ಯಾಯಾಮ ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದನ್ನು ಮರೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯೂ ವ್ಯಾಯಾಮ ಹಾಗೂ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಇಲಾಖೆಯ ವತಿಯಿಂದ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಲಾಂಗ್ ಜಂಪ್, ಶಾಟ್‌ಪುಟ್‌, ಓಟ ಹಾಗೂ ಸೌಹಾರ್ದ ಕ್ರಿಕೆಟ್‌ ಪಂದ್ಯಾವಳಿ ನಡೆಯಿತು. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಮಾಧ್ಯಮ ತಂಡಗಳ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಮಾಧ್ಯಮ ತಂಡ ಜಯಭೇರಿ ಬಾರಿಸಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಾಂತವೀರ, ಸಿಂಧನೂರು ಉಪವಿಭಾಗದ ಡಿವೈಎಸ್‌ಪಿ ಚಂದ್ರಶೇಖರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ ದಾಖಲೆಗೆ ಬದಾಮಿಗೆ ಎಡತಾಕುತ್ತಿರುವ ರೈತರು!

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ...

ಏಕರೂಪ ಶಿಕ್ಷಣಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಿ, ಬಡವರು ಮತ್ತು ಶ್ರೀಮಂತರ ಮಕ್ಕಳೆನ್ನದೆ...

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....