ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಆತ್ಮಹತ್ಯೆ: ಪ್ರಕರಣ ದಾಖಲು

Date:

ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಖೈದಿಯೊಬ್ಬರು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

- Advertisement -

ಮೃತನನ್ನು ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜುಲೈ 22ರಂದು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ರಿಮ್ಸ್ ಆಸ್ಪತ್ರೆಯ ಖೈದಿಗಳ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪವನ್ ಕುಮಾರ್ ಅವರಿಗೆ ಕ್ಷಯರೋಗ (ಟಿಬಿ) ಹಾಗೂ ಅನ್ನನಾಳದಲ್ಲಿ ರಕ್ತಸ್ರಾವದ ಸಮಸ್ಯೆ ಇದ್ದು, ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಶೌಚಾಲಯಕ್ಕೆ ತೆರಳಿದ್ದ ಪವನ್ ಕುಮಾರ್ ಬಹಳ ಸಮಯವಾದರೂ ಹೊರಬರದ ಹಿನ್ನೆಲೆಯಲ್ಲಿ ವಾರ್ಡ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಬಳಿಕ ಶೌಚಾಲಯದ ಬಾಗಿಲು ತೆರದು ಪರಿಶೀಲಿಸಿದಾಗ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆಯ ಅವೈಜ್ಞಾನಿಕ ನೇಮಕಾತಿ ವಿರೋಧಿಸಿ ಕೃಷಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂಬಂಧ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆದಿಮದಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವ ಸಂಭ್ರಮ, ಕಿಕ್ಕಿರಿದ ಪ್ರೇಕ್ಷಕರು.

ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕೋಲಾರ ಆದಿಮ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ...

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...