ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧರಿಸಿ ಮೂವರ ವಿರುದ್ಧ ಪ್ರಕರಣ ದಾಖಲು

Date:

ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಪವನಕುಮಾರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಸಹ ಕೈದಿಗಳಿಂದ ನಿರಂತರವಾಗಿ ನಡೆದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆತ ಬರೆದಿರುವ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಮೂವರು ಸಹ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ಪವನಕುಮಾರ ಹುಬ್ಬಳ್ಳಿ ಎಂಬಾತನನ್ನು ಚಿಕಿತ್ಸೆಗಾಗಿ ರಿಮ್ಸ್ ಖೈದಿ ವಾರ್ಡನಲ್ಲಿ ಜು.28 ರಂದು ದಾಖಲಿಸಲಾಗಿತ್ತು. ಆತನ ಶೌಚಕ್ಕೆ ಹೋಗುವುದಾಗಿ ಹೇಳಿ ಶೌಚಾಲಯ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮೃತ ವ್ಯಕ್ತಿ ದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದಾಗ ಡೆತ್‌ನೋಟ ದೊರಕಿದ್ದು ಸಹ ಕೈದಿಗಳಾದ ಪ್ರಭಾಕರ ರೆಡ್ಡಿ, ವಿನಯರೆಡ್ಡಿ, ಮಹೇಶ ರಾಳಲದೊಡ್ಡಿ, ಶಿವರಾಜ ಸಿರವಾರ ಎಂಬುವರ ಕಿರುಕುಳವೇ ಕಾರಣವೆಂದು ಡೆತ್‌ನೋಟನಲ್ಲಿ ಬರೆದಿದ್ದರಿಂದ ಜಿಲ್ಲಾ ಕಾರಾಗೃಹದ ಅಧಿಕಾರಿ ಅನಿತಾ ಹೀರೆಮನಿ ನೀಡಿದ ದೂರಿನ ಮೇರೆಗೆ ಮಾರ್ಕೆಟ್ ಯಾರ್ಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಕೈದಿಗಳ ವಾರ್ಡ್‌ನಲ್ಲಿ ದಾಖಲಾಗಿದ್ದ ವೇಳೆ, ಸಹ ಕೈದಿಗಳಾದ ಪ್ರಭಾಕರರೆಡ್ಡಿ, ವಿನಯರೆಡ್ಡಿ, ಮಹೇಶ ರಾಳಲದೊಡ್ಡಿ, ಶಿವರಾಜ ಸಿರವಾರ ಸೇರಿದಂತೆ ಇನ್ನಿಬ್ಬರು ನಿತ್ಯವೂ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತ ಪವನಕುಮಾರ ತನ್ನ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾನೆ.

ಡೆತ್ ನೋಟ್ ಪ್ರಕಾರ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಲ್ಲದೆ, ಕ್ಷಯರೋಗ (ಟಿಬಿ)ದಿಂದ ಬಳಲುತ್ತಿದ್ದ ಪವನಕುಮಾರನನ್ನು ಕೀಳಾಗಿ ಕಾಣುತ್ತಿದ್ದರು. ಊಟ ಮಾಡುವ ವೇಳೆ ತಟ್ಟೆಯಲ್ಲಿ ಉಗುಳುವುದು, ನೀರು ಸುರಿಯುವುದು, ಗಂಜಿಯನ್ನು ಚೆಲ್ಲುವುದು ಸೇರಿದಂತೆ ವಿವಿಧ ರೀತಿಯ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ನಿರಂತರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಜಿಲ್ಲಾ ಕಾರಾಗೃಹ ಅಧಿಕಾರಿಯವರು ನೀಡಿದ ದೂರಿನ ಮೇರೆಗೆ ಪ್ರಭಾಕರರೆಡ್ಡಿ, ವಿನಯರೆಡ್ಡಿ, ಮಹೇಶ ರಾಳಲದೊಡ್ಡಿ, ಶಿವರಾಜ ಸಿರವಾರ ಸೇರಿದಂತೆ ಒಟ್ಟು ಆರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 108, 54, 352 ಹಾಗೂ 3(5)ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ನಗರದಲ್ಲಿ ನಡೆದ ಘರ್ಷಣೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣ ದೀನ ಕೈದಿಗಳು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಾಗಿತ್ತು. ಸಹ ಕೈದಿಗೆ ಕಿರುಕುಳ ನೀಡಿದ್ದರಿಂದ ಮತ್ತೊಂದು ಪ್ರಕರಣ ಎದುರಿಸುವಂತಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...