ರಾಯಚೂರು | ಇ-ಕೆವೈಸಿಯಲ್ಲಿ ರಾಯಚೂರು ಪ್ರಗತಿ: ಆಹಾರ ಧಾನ್ಯ ವಿತರಣೆಗೆ ವೇಗ ಹೆಚ್ಚಿಸಲು ಸಚಿವ ರಿಜ್ವಾನ್ ಅರ್ಷದ್ ಸೂಚನೆ

Date:

ಇ-ಕೆವೈಸಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಆಹಾರ ಧಾನ್ಯಗಳ ವಿತರಣೆಯಲ್ಲಿ ಇನ್ನಷ್ಟು ವೇಗ ಹೆಚ್ಚಿಸಿ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಆಹಾರ ತಲುಪಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ಸೂಚಿಸಿದರು.

- Advertisement -

ನವೆಂಬರ್ 28ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪ್ರಸ್ತುತ ಆಹಾರ ಧಾನ್ಯಗಳ ವಿತರಣೆಯಲ್ಲಿ ಶೇ.88.23ರಷ್ಟು ಪ್ರಗತಿ ಸಾಧಿಸಲಾಗಿದೆ. ನವೆಂಬರ್ 29 ಮತ್ತು 30ರೊಳಗೆ ಬಾಕಿ ಇರುವ ವಿತರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಉಳಿದ ದಿನಗಳಲ್ಲಿ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಿದರೆ ನಿಗದಿತ ಗುರಿ ತಲುಪಲು ಸಾಧ್ಯವಿದೆ. ಆಹಾರ ಧಾನ್ಯಗಳ ವಿತರಣೆಯಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೊಸ ಪಡಿತರ ಚೀಟಿಗಳ ವಿಲೇವಾರಿ ಕುರಿತು ಮಾತನಾಡಿದ ಅವರು, ಮೇ 18ರ ನಂತರ ಸ್ವೀಕರಿಸಿದ ಅರ್ಜಿಗಳು ಸೇರಿದಂತೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಅನರ್ಹ ಅಥವಾ ಮೃತ ಫಲಾನುಭವಿಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು. ಕ್ಷೇತ್ರಮಟ್ಟದ ಪರಿಶೀಲನೆ ಮೂಲಕ ದತ್ತಾಂಶಗಳನ್ನು ನವೀಕರಿಸಬೇಕು. ಹಿರಿಯ ನಾಗರಿಕರ ನೋಂದಣಿ ಪ್ರಕ್ರಿಯೆಯನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು. 65 ವರ್ಷ ಮೇಲ್ಪಟ್ಟ ಕೆಲವು ಫಲಾನುಭವಿಗಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಅಂತಹ ಪ್ರಕರಣಗಳ ವಿವರಗಳನ್ನು ಪರಿಶೀಲಿಸಿ ದತ್ತಾಂಶ ನವೀಕರಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ಕಿ ಸಾಗಾಟ, ಕಳ್ಳಸಾಗಣೆ ಹಾಗೂ ಪಡಿತರ ಚೀಟಿಗಳ ದುರ್ಬಳಕೆ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು 270 ಪ್ರಕರಣಗಳನ್ನು ದಾಖಲಿಸಿ, 272 ಮಂದಿಯನ್ನು ಬಂಧಿಸಲಾಗಿದೆ. ಆದರೆ, ರಾಜ್ಯದ ಒಟ್ಟಾರೆ ಪರಿಸ್ಥಿತಿಗೆ ಹೋಲಿಸಿದರೆ ರಾಯಚೂರು ಜಿಲ್ಲೆಯ ಪ್ರಗತಿ ತೃಪ್ತಿಕರವಾಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ರಾಯಚೂರು ಗಡಿ ಜಿಲ್ಲೆಯಾಗಿರುವುದರಿಂದ ಇಲ್ಲಿ ಹೆಚ್ಚಿನ ಮಟ್ಟದಲ್ಲಿ ಕಾರ್ಯಾಚರಣೆ ನಡೆಯಬೇಕು. ಬೇರೆಡೆಗಳಲ್ಲಿ ಒಬ ಸದಸರ ಹೆಸರಿನಲಿ ಕುಟುಂಬದ ಮೂವರು ಅಥವಾ ನಾಲ್ವರು ಸದಸ್ಯರನ್ನು ಸೇರಿಸಿ ಪಡಿತರ ಚೀಟಿಗಳನ್ನು ಸ್ಥಳಾಂತರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳು ಕೆಳಹಂತದಲ್ಲಿ ಹೇಗೆ ನಡೆಯುತ್ತಿವೆ ಎಂಬುದನ್ನು ಪತ್ತೆಹಚ್ಚಬೇಕು ಎಂದು ಸಚಿವರು ಸೂಚಿಸಿದರು.

ಈ ವೇಳೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ನಜೀ‌ರ್ ಅಹಮದ್‌ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4,57,287 ಪಿಎಚ್‌ಎಚ್ ಪಡಿತರ ಚೀಟಿಗಳಿದ್ದು, ಅವುಗಳ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಎಎವೈ ಪಡಿತರ ಚೀಟಿಗಳಲ್ಲಿ 1,90,386 ಸದಸ್ಯರಿದ್ದಾರೆ. ಪಿಎಚ್‌ಎಚ್/ಬಿಪಿಎಲ್ ಪಡಿತರ ಚೀಟಿಗಳಲ್ಲಿ 14,92,394 ಫಲಾನುಭವಿಗಳಿದ್ದು, ಜಿಲ್ಲೆಯಲ್ಲಿ ಒಟ್ಟಾರೆ 16,82,780 ಫಲಾನುಭವಿಗಳು ಪಡಿತರ ಪಟ್ಟಿಯಲ್ಲಿ ನೋಂದಾಯಿತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲೆಯಲಿ ಒಟು 741 ನ್ಯಾಯಬೆಲೆ ಅಂಗಡಿಗಳಿವೆ. ಇಲಾಖೆಯ ದತ್ತಾಂಶ ವ್ಯವಸ್ಥೆಗೆ ಸೇರಿಸಲಾಗಿದ್ದು, ಪ್ರಸ್ತುತ 741 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇ-ಕೆವೈಸಿ ಪ್ರಗತಿ : ಜಿಲ್ಲೆಯ ಒಟ್ಟು 16,82,780

ಫಲಾನುಭವಿಗಳ ಪೈಕಿ ಈವರೆಗೆ 16,73,130 ಮಂದಿಯ ಇ-ಕೆವೈಸಿ ಪೂರ್ಣಗೊಂಡಿದೆ. ಇನ್ನೂ 9,650 ಮಂದಿಯ ಇ-ಕೆವೈಸಿ ಬಾಕಿ ಇದ್ದು ಒಟ್ಟಾರೆ ಶೇ.99.43ರಷ್ಟು ಪ್ರಗತಿ ಸಾಧಿಸಲಾಗಿದೆ. ಐದು ವರ್ಷದೊಳಗಿನ ಮಕ್ಕಳ ಇ-ಕೆವೈಸಿಗೆ ಸಂಬಂಧಿಸಿದಂತೆ ಈ ಹಿಂದೆ ಮಾಡಲಾಗಿದ್ದ ಪ್ರಕ್ರಿಯೆಯನ್ನು ಮತ್ತೆ ನವೀಕರಿಸಬೇಕಿದೆ. ಸುಮಾರು 9.50 ಲಕ್ಷ ಮಕ್ಕಳ ಪೈಕಿ 7,89,003 ಮಕ್ಕಳ ಇ-ಕೆವೈಸಿ ನವೀಕರಣ ಪೂರ್ಣಗೊಂಡಿದ್ದು, 1,61,046 ಮಕ್ಕಳ ಪ್ರಕ್ರಿಯೆ ಬಾಕಿ ಇದೆ. ಈ ವಿಭಾಗದಲ್ಲಿ ಶೇ.83.05ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಸಭೆಯಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ಎನ್.ಎಸ್. ಭೋಸುರಾಜು, ಮಾನ್ವಿ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್‌., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾ‌ರ್ ಕಾಂದೂ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಹರೀಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಕನ್ನಡ ಭಾಷೆಯ ವೈಭವ, ಏಕೀಕರಣದ ಹೆಮ್ಮೆ ಸಾರಿದ ‘ಹಚ್ಚೇವು ಕನ್ನಡದ ದೀಪ’ ಕಾರ್ಯಕ್ರಮ

ಕನ್ನಡ ಭಾಷೆ ಹಳೆಗನ್ನಡ, ನಡುಗನ್ನಡ, ಆಧುನಿಕ ಸಾಹಿತ್ಯ ಸೇರಿದಂತೆ ಶರಣರು, ದಾಸರು,...

ರಾಯಚೂರು | ₹35 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಶಾಸಕ ವಜ್ಜಲ್ ಅಡ್ಡಿ: ಹೂಲಗೇರಿ ಆರೋಪ

ಕರಡಕಲ್ ಹೊರ ವಲಯದಲ್ಲಿ ₹35 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ತಾಯಿ ಮಕ್ಕಳ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...